ದಲಿತರ ಮನೆಯಲ್ಲಿ ಭೋಜನ ಸವಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಭಾರಿ ಸಿದ್ಧತೆ...

Published On :
ವಾರಣಾಸಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಭಾರಿ ಸಿದ್ಧತೆ ನಡೆಸಿದೆ. ನಿನ್ನೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಿ ದಲಿತರ ಮನೆಯಲ್ಲಿ ಭೋಜನ ಸವಿದಿದ್ದಾರೆ.
ವಾರಣಾಸಿಯ ಜೋಗಿಯಾಪುರಿ ಗ್ರಾಮದ ಗಿರಿಜಾ ಪ್ರಸಾದ್ ಬಿಂದ್ ಎಂಬ ದಲಿತರ ಮನೆಯಲ್ಲಿ ಅಮಿತ್ ಶಾ ಭೋಜನ ಸೇವಿಸಿ, ಅಲ್ಲಿಂದ ಅಲಹಬಾದ್ ಗೆ ತೆರಳಿದರು.
ಸಾಮಾನ್ಯವಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ದಲಿತರ ಮನೆಗಳಿಗೆ ಭೇಟಿ ಕೊಡುತ್ತಿದ್ದರು. ಅದೇ ರೀತಿ ಅಮಿತ್ ಶಾ ಅವರು ದಲಿತರ ಮನೆಗೆ ಭೇಟಿ ನೀಡಿ ಭೋಜನ ಸವಿದಿರುವುದು ವಿಶೇಷ. ಭೋಜನದಲ್ಲಿ ಸೋರೆಕಾಯಿ ಪಲ್ಯ ಮತ್ತು ರೊಟ್ಟಿ ಮಾಡಲಾಗಿತ್ತು. ಅಮಿತ್ ಶಾ ಅವರಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಾಥ್ ನೀಡಿದರು.
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಮತದಾರರನ್ನು ಓಲೈಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ದಲಿತರ ಮನೆಯಲ್ಲಿ ಭೋಜನ ಸವಿದಿದ್ದು, ಇಂದು ಅಲಹಬಾದ್ ನಲ್ಲಿ ರೈತರ ಕುರಿತು ಸಮಾವೇಶ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


