ದಾದ್ರಿ ಪ್ರಕರಣ: ಅಖ್ಲಾಕ್ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲಿರುವ ಆರೋಪಿ ತಂದೆ
ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ದಾದ್ರಿ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಅಖ್ಲಾಕ್ ಕುಟುಂಬ ವಿರುದ್ಧ ಆರೋಪಿ ವಿಶಾಲ್ ತಂದೆ ಪ್ರಕರಣ ದಾಖಲಿಸಲು ನಿರ್ಧಾರಿಸಿದ್ದಾರೆಂದು...

ನವದೆಹಲಿ: ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ದಾದ್ರಿ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಅಖ್ಲಾಕ್ ಕುಟುಂಬ ವಿರುದ್ಧ ಆರೋಪಿ ವಿಶಾಲ್ ತಂದೆ ಪ್ರಕರಣ ದಾಖಲಿಸಲು ನಿರ್ಧಾರಿಸಿದ್ದಾರೆಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ತನಿಖಾ ವರದಿಯಲ್ಲಿ ಅಖ್ಲಾಕ್ ಮನೆಯಲ್ಲಿದ್ದಿದ್ದು ಗೋಮಾಂಸವೇ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ವಿಶಾಲ್ ತಂದೆ ಸಂಜಯ್ ರಾಣಾ ಅವರು ಅಖ್ಲಾಕ್ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲು ತೀರ್ಮಾನಿಸಿದ್ದಾರೆನ್ನಲಾಗಿದೆ.
ಗೋಹತ್ಯೆ ಮಾಡಿರುವುದರ ವಿರುದ್ಧ ಅಖ್ಲಾಕ್ ಕುಟುಂಬದ ವಿರುದ್ಧ ನಾವು ಪ್ರಕರಣ ದಾಖಲಿಸುತ್ತೇವೆ. ಗೋಮಾಂಸ ಸೇವನೆ ಮಾಡಿದ ಅಖ್ಲಾಕ್ ಕುಟುಂಬದ ವಿರುದ್ಧ ನ್ಯಾಯಾಲಯ ಕ್ರಮ ಕೈ ಗೊಳ್ಳಬೇಕೆಂದು ಸಂಜಯ್ ರಾಣಾ ಅವರು ಹೇಳಿದ್ದಾರೆ.
ಇದೇ ವೇಳೆ ಪ್ರಕರಣದಲ್ಲಿ ತಮ್ಮ ಮಗನ ಇರುವಿಕೆ ಪ್ರಶ್ನೆ ಕುರಿತಂತೆ ಮಾತನಾಡಿರುವ ಅವರು, ನನ್ನ ಮಗ ವಿಶಾಲ್ ತಪ್ಪಿತಸ್ಥನೋ, ಅಲ್ಲವೋ ಎಂಬುದನ್ನು ನ್ಯಾಯಾಲಯ ತೀರ್ಮಾನ ಮಾಡಲಿದೆ. ಅಖ್ಲಾಕ್ ಕೊಲೆಯನ್ನು ನಾವು ಖಂಡಿಸುತ್ತೇವೆ. ಆದರೆ, ಗೋಮಾಂಸ ತಿಂದು ಜನರ ನಂಬಿಕೆಗೆ ನೋವುಂಟು ಮಾಡಿರುವ ಅಖ್ಲಾಕ್ ಕುಟುಂಬಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇವೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


