ದೇಶ

ಕೇಂದ್ರ ಸರ್ಕಾರ ಶೀಘ್ರವೇ ಸಂಸದರ ವೇತನವನ್ನು ಶೇಕಡಾ 100ರಷ್ಟು ಹೆಚ್ಚಿಸುವ ಸಾಧ್ಯತೆ

ಶೀಘ್ರವೇ ಸಂಸದರ ವೇತನ ಏರಿಕೆಯಾಗುವ ಸಾಧ್ಯತೆಯಿದ್ದು, ಕೇಂದ್ರ ಸರ್ಕಾರ ಸಂಸದರ ವೇತನವನ್ನು...

ಕೇಂದ್ರ ಸರ್ಕಾರ ಶೀಘ್ರವೇ ಸಂಸದರ ವೇತನವನ್ನು ಶೇಕಡಾ 100ರಷ್ಟು ಹೆಚ್ಚಿಸುವ ಸಾಧ್ಯತೆ
ಭಾರತದ ಸಂಸತ್ತು(ಸಂಗ್ರಹ ಚಿತ್ರ)
Published On :
ನವದೆಹಲಿ: ಶೀಘ್ರವೇ ಸಂಸದರ ವೇತನ ಏರಿಕೆಯಾಗುವ ಸಾಧ್ಯತೆಯಿದ್ದು, ಕೇಂದ್ರ ಸರ್ಕಾರ ಸಂಸದರ ವೇತನವನ್ನು ಶೇಕಡಾ 100ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಸಂಸದರ ಮೂಲ ಭತ್ಯೆ ಮಾಸಿಕ 50 ಸಾವಿರ ರೂಪಾಯಿಯಿಂದ 1 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ.
 ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ನೇತೃತ್ವದ ಸಂಸತ್ ಸದಸ್ಯರ ವೇತನ ಮತ್ತು ಭತ್ಯೆಗಳ ಜಂಟಿ ಸಮಿತಿ ಮಾಡಿರುವ ಶಿಫಾರಸುಗಳನ್ನು ಪರಿಗಣಿಸಲು ಪ್ರಧಾನ ಮಂತ್ರಿಗಳ ಕಾರ್ಯಾಲಯ ಒಪ್ಪಿದೆ ಎಂದು ಗೊತ್ತಾಗಿದೆ.
ಸಂಸದರ ವೇತನ ಮಾತ್ರವಲ್ಲದೆ ಭತ್ಯೆಯನ್ನು ಸಹ ಪರಿಷ್ಕರಣೆ ಮಾಡಲು ಪ್ರಧಾನಿ ಕಾರ್ಯಾಲಯ ಒಪ್ಪಿಕೊಂಡಿದೆ. 
ಇದಲ್ಲದೆ ಕೇಂದ್ರ ಸರ್ಕಾರ, ರಾಷ್ಟ್ರಪತಿಗಳ  ವೇತನವನ್ನು ಒಂದೂವರೆ ಲಕ್ಷದಿಂದ 5 ಲಕ್ಷದವರೆಗೆ, ರಾಜ್ಯಪಾಲರ ವೇತನವನ್ನು 1 ಲಕ್ಷದ 10 ಸಾವಿರದಿಂದ ಎರಡೂವರೆ ಲಕ್ಷಕ್ಕೆ ಹೆಚ್ಚಿಸಲು ಚಿಂತನೆ ನಡೆಸುತ್ತಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.