ದೇಶ

ಮಾಜಿ ಯೋಧ ರಾಮ್ ಅಂತ್ಯಕ್ರಿಯೆ; ಗ್ರಾಮಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಮಾಜಿ ಯೋಧ ರಾಮ್ ಕಿಶನ್ ಗರೆವಾಲ್ ಅವರ...

ಮಾಜಿ ಯೋಧ ರಾಮ್ ಅಂತ್ಯಕ್ರಿಯೆ; ಗ್ರಾಮಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ಬಿವಾನಿ: ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಮಾಜಿ ಯೋಧ ರಾಮ್ ಕಿಶನ್ ಗರೆವಾಲ್ ಅವರ ಸ್ವಗ್ರಾಮಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ್ದು, ಸೈನಿಕನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

ಹರ್ಯಾಣ ಮೂಲದ ನಿವೃತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಅವರು ದೆಹಲಿ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದೆಹಲಿಯಲ್ಲಿರುವ ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಅವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಮೃತದೇಹ ಹಸ್ತಾಂತರಿಸಲಾಗಿದ್ದು, ಇಂದು ಹರ್ಯಾಣದ ಬಿವಾನಿ ಜಿಲ್ಲೆಯ ಬಾಮ್ಲಾಗೆ ಮೃತದೇಹವನ್ನು ತರಲಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ರಾಮ್ ಕಿಶನ್ ಗ್ರೆವಾಲ್ ಮನೆಗೆ ಮೊದಲು ಭೇಟಿ ನೀಡಿರುವ ರಾಹುಲ್ ಗಾಂಧಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ರಾಹುಲ್ ಗಾಂಧಿಗೆ ಕಾಂಗ್ರೆಸ್ ಮುಖಂಡರಾದ ಕಮಲ್ ನಾಥ್, ಬುಪೀಂಧರ್ ಸಿಂಗ್ ಹೂಡಾಕಿರಣ್ ಚೌದರಿ, ಕುಲ್ದೀಪ್ ಮತ್ತಿತ್ತರು ಸಾಥ್ ನೀಡಿದ್ದಾರೆ.

ರಾಮ್ ಕಿಶನ್ ಗ್ರೆವಾಲ್ ಅವರ ಅಂತಿಮ ದರ್ಶನ ಪಡೆಯಲು ಗ್ರಾಮಸ್ಥರೆಲ್ಲಾ ಅವರ ಮನೆಯ ಮುಂದೆ ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.