ಒಆರ್'ಒಪಿ ಆತ್ಮಹತ್ಯೆ ವಿವಾದ: ಕಾಂಗ್ರೆಸ್, ಆಪ್ ವಿರುದ್ಧ ವಿ.ಕೆ. ಸಿಂಗ್ ಕಿಡಿ
ಯೋಧನ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ರಾಜಕೀಯ ಆಟವಾಡುತ್ತಿದ್ದಾರೆಂದು ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು ಶುಕ್ರವಾರ...

ನವದೆಹಲಿ: ಯೋಧನ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ರಾಜಕೀಯ ಆಟವಾಡುತ್ತಿದ್ದಾರೆಂದು ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
ಸಮಾನ ವೇತನ ಮತ್ತು ಸಮಾನ ಪಿಂಚಣಿ ಯೋಜನೆ ಜಾರಿ ಕುರಿತು ವಿಳಂಬ ನೀತಿಯನ್ನು ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಮಾಡಿ ಯೋಧ ರಾಮ್ ಕಿಶನ್ ಗ್ರೆವಾಲ್ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದರು. ಯೋಧನ ಆತ್ಮಹತ್ಯೆಗೆ ಕಾಂಗ್ರೆಸ್ ನಾಯಕರು ಹಾಗೂ ಆಪ್ ಪಕ್ಷದ ನಾಯಕರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು. ಅಲ್ಲದೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ನಿನ್ನೆ ಯೋಧನ ಅಂತಿಮ ಸಂಸ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಿಕೆ. ಸಿಂಗ್ ಅವರು, ದೇಶಕ್ಕಾಗಿ ಹೋರಾಡಿ ಸಾಕಷ್ಟು ಯೋಧರು ಹುತಾತ್ಮರಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಆಪ್ ಪಕ್ಷ ನಾಯಕರು ಯಾವುದೇ ಯೋಧನ ಅಂತಿಮ ಸಂಸ್ಕಾರಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೇ...? ಯೋಧನ ಆತ್ಮಹತ್ಯೆ ಪ್ರಕರಣವನ್ನು ಹಿಡಿದು ರಾಹುಲ್ ಹಾಗೂ ಆಪ್ ನಾಯಕರು ರಾಜಕೀಯ ಆಟವನ್ನು ಆಡುತ್ತಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


