ದೇಶ

ಜಮ್ಮುವಿನಲ್ಲಿ ಮುಂದುವರೆದ ದುಷ್ಕರ್ಮಿಗಳ ಅಟ್ಟಹಾಸ: ಮತ್ತೆ 2 ಸರ್ಕಾರಿ ಶಾಲೆಗಳಿಗೆ ಬೆಂಕಿ

ಜಮ್ಮು ಮತ್ತು ಕಾಶ್ಮೀರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದ್ದು, ಮತ್ತೆ 2 ಸರ್ಕಾರಿ ಶಾಲೆಗಳಿಗೆ ಬೆಂಕಿ ಹೆಚ್ಚಿರುವ ಘಟನೆ ಬಂಡೀಪುರ ಜಿಲ್ಲೆಯಲ್ಲಿ ಶನಿವಾರ...

ಜಮ್ಮುವಿನಲ್ಲಿ ಮುಂದುವರೆದ ದುಷ್ಕರ್ಮಿಗಳ ಅಟ್ಟಹಾಸ: ಮತ್ತೆ 2 ಸರ್ಕಾರಿ ಶಾಲೆಗಳಿಗೆ ಬೆಂಕಿ
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದ್ದು, ಮತ್ತೆ 2 ಸರ್ಕಾರಿ ಶಾಲೆಗಳಿಗೆ ಬೆಂಕಿ ಹೆಚ್ಚಿರುವ ಘಟನೆ ಬಂಡೀಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಹಲವು ದಿನಗಳಿಂದಲೂ ಜಮ್ಮುವಿನಲ್ಲಿರುವ ಸರ್ಕಾರಿ ಶಾಲೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚುತ್ತಲೇ ಬಂದಿದ್ದು, ಇಂದು ಕೂಡ 2 ಶಾಲೆಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸವನ್ನು ಮೆರೆದಿದ್ದಾರೆ. ದುಷ್ಕರ್ಮಿಗಳ ಈ ಅಟ್ಟಹಾಸಕ್ಕೆ ಈ ವರೆಗೂ 32 ಶಾಲೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಂಡೀಪುರ ಜಿಲ್ಲೆಯ ಸೈದ್ನಾರದಲ್ಲಿರುವ ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಿರುವ ಅನಾಮಧೇಯ ವ್ಯಕ್ತಿಗಳು, ಸ್ಥಳದಿಂದ ಪರಾರಿಯಾಗಿದ್ದಾರೆ. ಇದೀಗ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.