ದೇಶ

ಹಿಂದೆ ಪ್ರತಿಯೊಂದಕ್ಕೂ ಆರ್ ಎಸ್ಎಸ್ ದೂಷಣೆ; ಈಗ ಪ್ರಧಾನಿಯನ್ನು ದೂಷಿಸುತ್ತಿದ್ದಾರೆ: ವೆಂಕಯ್ಯ

ವಿರೋಧಪಕ್ಷಗಳ ಬಗ್ಗೆ ಟೀಕೆ ಮಾಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಪ್ರತಿ ವಿಷಯದಲ್ಲೂ ಪ್ರಧಾನಿ ಮೋದಿ ಅವರನ್ನು ದೂಷಿಸುವುದು ಫ್ಯಾಷನ್ ಆಗಿದೆ ಎಂದು ಹೇಳಿದ್ದಾರೆ.

ಹಿಂದೆ ಪ್ರತಿಯೊಂದಕ್ಕೂ ಆರ್ ಎಸ್ಎಸ್ ದೂಷಣೆ; ಈಗ ಪ್ರಧಾನಿಯನ್ನು ದೂಷಿಸುತ್ತಿದ್ದಾರೆ: ವೆಂಕಯ್ಯ
Published On :
ನವದೆಹಲಿ: ವಿರೋಧಪಕ್ಷಗಳ ಬಗ್ಗೆ ಟೀಕೆ ಮಾಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಪ್ರತಿ ವಿಷಯದಲ್ಲೂ ಪ್ರಧಾನಿ ಮೋದಿ ಅವರನ್ನು ದೂಷಿಸುವುದು ಫ್ಯಾಷನ್ ಆಗಿದೆ ಎಂದು ಹೇಳಿದ್ದಾರೆ. 
ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ) ಗಾಗಿ ನಿವೃತ್ತ ಯೋಧ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ವೆಂಕಯ್ಯ ನಾಯ್ಡು, ಪ್ರಚಾರಕ್ಕಾಗಿ ಪ್ರತಿಯೊಂದು ವಿಷಯದಲ್ಲಿಯೂ ಪ್ರಧಾನಿ ಮೋದಿ ಅವರ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಹೇಳಿದ್ದಾರೆ. 
ಈ ಹಿಂದೆ ಮಳೆ ಬಾರದೇ ಇದ್ದರೆ, ಯಾರಿಗಾದರೂ ಮಕ್ಕಳಾಗದೇ ಇದ್ದರೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ನ್ನು ದೂಷಿಸಲಾಗುತ್ತಿತ್ತು, ಈಗ ಎಲ್ಲದಕ್ಕೂ ನರೇಂದ್ರ ಮೋದಿ ಅವರನ್ನು ದೂಷಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ ಈಗ  .
ಒಆರ್ ಒಪಿ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ ಪ್ರಧಾನಿ ಹೇಳುತ್ತಿರುವ ಒಆರ್ ಒಪಿ ಕೇವಲ ಪಿಂಚಣಿಯ ಏರಿಕೆಯಷ್ಟೆ, ಆದ್ದರಿಂದ ಪ್ರಧಾನಿ ಒಆರ್ ಒಪಿ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕರು ಮೋದಿ ಅವರನ್ನು ದೂಷಿಸುವ ಮೂಲಕ ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವ ಪೈಪೋಟಿಯಲ್ಲಿ ತೊಡಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. 
ಎನ್ ಡಿಟಿವಿ ನಿಷೇಧಕ್ಕೆ ವ್ಯಕ್ತವಾಗುತ್ತಿರುವ ಟೀಕೆ ರಾಜಕೀಯ ಪ್ರೇರಿತ
ಇದೇ ವೇಳೆ ಎನ್ ಡಿ ಟಿವಿಗೆ ಒಂದು ದಿನದ ನಿಷೇಧ ವಿಧಿಸಿರುವ ಬಗ್ಗೆ ವ್ಯಕ್ತವಾಗುತ್ತಿರುವ ಟೀಕೆಗಳು ರಾಜಕೀಯ ಪ್ರೇರಿತ ಹಾಗೂ ತಡವಾಗಿ ವ್ಯಕ್ತವಾಗುತ್ತಿರುವ ಟೀಕೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. 

ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯ ನೇರ ಪ್ರಸಾರ ಕಾರ್ಯಕ್ರಮದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಎನ್ ಡಿಟಿವಿಗೆ ಒಂದು ದಿನದ ಕಾಲ ನಿಷೇಧ ವಿಧಿಸಲಾಗಿದೆ, ಆದರೆ ಎನ್ ಡಿಟಿವಿಗೆ ವಿಧಿಸಲಾಗಿರುವ ನಿಷೇಧದ  ಬಗ್ಗೆ ತಪ್ಪು ಮಾಹಿತಿ ನೀಡಿ ರಾಜಕೀಯ ಪ್ರೇರಿತ ಆರೋಪ ಮಾಡಲಾಗುತ್ತಿದೆ ಎಂದು ವೆಂಕಯ್ಯ ನಾಯ್ಡು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.