ದೇಶ

ಭಯೋತ್ಪಾದನೆ ಬಗ್ಗೆ ಭಾರತ- ಚೀನಾ ಚರ್ಚೆ, ಆದರೆ ಉಗ್ರ ಅಜರ್ ನಿಷೇಧದ ಬಗ್ಗೆ ಪ್ರಸ್ತಾಪ ಇಲ್ಲ!

ಭಾರತ ಮತ್ತು ಚೀನಾ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಭಯೋತ್ಪಾದನೆ ನಿಗ್ರಹ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಭಯೋತ್ಪಾದನೆ ಬಗ್ಗೆ ಭಾರತ- ಚೀನಾ ಚರ್ಚೆ, ಆದರೆ ಉಗ್ರ ಅಜರ್ ನಿಷೇಧದ ಬಗ್ಗೆ ಪ್ರಸ್ತಾಪ ಇಲ್ಲ!
ಭಯೋತ್ಪಾದನೆ ಬಗ್ಗೆ ಭಾರತ- ಚೀನಾ ಚರ್ಚೆ
Published On :
ಹೈದರಾಬಾದ್: ಭಾರತ ಮತ್ತು ಚೀನಾ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಭಯೋತ್ಪಾದನೆ ನಿಗ್ರಹ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. 
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್- ಚೀನಾ ರಾಷ್ಟ್ರೀಯ ಭದ್ರತಾ ಸಲಹೆಗಾರರು ಭಯೋತ್ಪಾದನೆ ನಿಗ್ರಹದ ವಿಷಯದ ಬಗ್ಗೆ ಚರ್ಚೆ ನಡೆಸಿದ್ದಾರೆಯಾದರು, ವಿಶ್ವಸಂಸ್ಥೆಯಲ್ಲಿ ಹಲವು ದಿನಗಳಿಂದ ಭಾರತದ ಬೇಡಿಕೆಯಾಗಿರುವ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ವಿಚಾರವಾಗಿ ಚರ್ಚೆ ನಡೆಸಿರುವುದರ ಬಗ್ಗೆ ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿಲ್ಲ. ಮಸೂದ್ ಅಜರ್ ಗೆ ನಿಷೇಧ ವಿಧಿಸುವ ಭಾರತದ ಯತ್ನಕ್ಕೆ ಚೀನಾ ಎರಡು ಬಾರಿ ವಿಶ್ವಸಂಸ್ಥೆಯಲ್ಲಿ ಅಡ್ಡಿ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವುದು ಅಗತ್ಯವಾಗಿತ್ತು.
ಹೈದರಾಬಾದ್ ನಲ್ಲಿ ಉಭಯ ದೇಶಗಳ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಚೀನಾ ರಾಷ್ಟ್ರೀಯ ಭದ್ರತಾ ಸಲಹೆಗಾರರು ಕಳೆದ 2 ತಿಂಗಳುಗಳಲ್ಲಿ ಮೂರನೇ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. " ಚೀನಾ ಭಾರತದ ನಡುವೆ ಸೌಹಾರ್ದಯುತ ಚರ್ಚೆ ನಡೆದಿದ್ದು, ದ್ವಿಪಕ್ಷೀಯ, ಪ್ರಾದೇಶಿಕ, ಅಂತಾರಾಷ್ಟ್ರೀಯ ವಿಷಯಗಳಲ್ಲಿ ಉಭಯ ರಾಷ್ಟ್ರಗಳ ಹಿತಾಸಕ್ತಿ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ವಿದೇಶಾಂಗ ಇಲಾಖೆ ಸಚಿವಾಲಯ ಮಾಹಿತಿ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.