ಬಿಹಾರ ರಾಜ್ಯದಂತೆಯೇ ಉತ್ತರಪ್ರದೇಶದಲ್ಲೂ ಬಿಜೆಪಿಯನ್ನು ಓಡಿಸುತ್ತೇವೆ: ಲಾಲು ಪ್ರಸಾದ್ ಯಾದವ್
ಬಿಹಾರ ರಾಜ್ಯದಲ್ಲಿ ಮಾಡಿದಂತೆಯೇ ಉತ್ತರಪ್ರದೇಶದಲ್ಲಿಯೂ ಬಿಜೆಪಿಯನ್ನು ಹಿಮ್ಮೆಟ್ಟಿಸುತ್ತೇವೆಂದು ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಶನಿವಾರ...

ಲಖನೌ: ಬಿಹಾರ ರಾಜ್ಯದಲ್ಲಿ ಮಾಡಿದಂತೆಯೇ ಉತ್ತರಪ್ರದೇಶದಲ್ಲಿಯೂ ಬಿಜೆಪಿಯನ್ನು ಹಿಮ್ಮೆಟ್ಟಿಸುತ್ತೇವೆಂದು ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಶನಿವಾರ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮಕ್ಕೆ ಹಾಜರಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿರುವ ಅವರು, ಸಮಾಜವಾದಿ ಪಕ್ಷದ ಶಕ್ತಿಯನ್ನು ಹೆಚ್ಚಿಸಲು ನಾವಿದ್ದೇವೆ. ಬಿಹಾರದಲ್ಲಿ ಬಿಜೆಪಿಯನ್ನು ಓಡಿಸಿದಂತೆಯೇ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಹಿಮ್ಮೆಟ್ಟುವಂತೆ ಮಾಡುತ್ತೇವೆಂದು ಹೇಳಿದ್ದಾರೆ.
ಸಮಾರಂಭದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರೂ ಕೂಡ ಹಾಜರಿದ್ದರು. ಕಾರ್ಯಕ್ರಮದಲ್ಲಿ ದೇವೇಗೌಡ ಅವರು ಹಾಜರಿದ್ದ ಕಾರಣ ಎರಡೂ ಪಕ್ಷಗಳ ಮೈತ್ರಿಯಾಗುವ ಕುರಿತಂತೆ ಅನುಮಾನಗಳು ಮೂಡತೊಡಿಗಿದ್ದವು. ಇದಕ್ಕೆ ಸ್ಪಷ್ಟನೆ ನೀಡಿದ ದೇವೇಗೌಡ ಅವರು, ಉತ್ತರಪ್ರದೇಶದ , ಗುಜರಾತ್ ಹಾಗೂ ಪಂಜಾಬ್ ನಲ್ಲಿ ನಡೆದ ಚುನಾವಣೆ ಬಳಿಕ ಸಾಕಷ್ಟು ಅನುಮಾನಗಳು ಮೂಡತೊಡಗಿವೆ. ಮೈತ್ರಿ ಕುರಿತಂತೆ ನಾನು ಇಲ್ಲಿಗೆ ಬಂದಿಲ್ಲ. ಸಮಾಜವಾದಿ ಪಕ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ನನಗೆ ಆಮಂತ್ರಣ ಪತ್ರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಬಂದಿದ್ದೇನೆಂದು ಹೇಳಿದ್ದರು.
ಇನ್ನು ದೇವೇಗೌಡ ಆಗಮನ ಕುರಿತಂತೆ ಎದ್ದಿರುವ ಅನುಮಾನಗಳಿಗೆ ಜೆಡಿ(ಯು) ನಾಯಕ ಶರದ್ ಯಾದವ್ ಅವರೂ ಕೂಡ ಸ್ಪಷ್ಟನೆ ನೀಡಿದ್ದು, ಸಮಾಜವಾದಿ ಪಕ್ಷದೊಂದಿಗೆ ಇದ್ದ ಹಳೆಯ ಸಂಬಂಧ ಹಿನ್ನೆಲೆಯಲ್ಲಿ ದೇವೇಗೌಡ ಅವರು ಪಕ್ಷದ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ತಿಳಿಸಿದರು.
ಮೈತ್ರಿ ಕುರಿತಂತೆ ಈ ವರೆಗೂ ಯಾವುದೇ ರೀತಿಯ ಮಾತುಕತೆಗಳು ನಡೆಸಿಲ್ಲ. ಈ ಬಗ್ಗೆ ಸ್ವತಃ ಮುಲಾಯಂ ಸಿಂಗ್ ಅವರೇ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಬಲ್ಲರು. ಸಮಾಜವಾದಿ ಪಕ್ಷ ಉತ್ತರಪ್ರದೇಶದಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿದೆ. ಈ ಬಗ್ಗೆ ಮಾತನಾಡಲು ಇದು ಸರಿಯಾದ ಸಮಯವಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


