ಹಲ್ಲೆ ಆರೋಪ: ಎಎಪಿಯ ಮತ್ತೊಬ್ಬ ಶಾಸಕನ ಬಂಧನ
ಛಠ್ ಪೂಜಾ ಆಚರಣೆ ವೇಳೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಆಮ್ ಆದ್ಮಿ...

Published On :
ನವದೆಹಲಿ: ಛಠ್ ಪೂಜಾ ಆಚರಣೆ ವೇಳೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಆಮ್ ಆದ್ಮಿ ಪಕ್ಷದ ಕಿರಾರಿ ಕ್ಷೇತ್ರದ ಶಾಸಕ ರಿತುರಾಜ್ ಗೋವಿಂದ್ ಅವರನ್ನು ಬಂಧಿಸಿದ್ದಾರೆ.
ಕಳೆದ ನವೆಂಬರ್ 3ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾರನ್ನು ವಶಕ್ಕೆ ಪಡೆದ ಮೂರು ದಿನಗಳಲ್ಲೇ ಎಎಪಿಯ ಮತ್ತೊಬ್ಬ ಶಾಸಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಛಠ್ ಪೂಜಾ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ರಿತುರಾಜ್ ಗೋವಿಂದ್ ಅವರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ನಂತರ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಎಂ.ಎನ್.ತಿವಾರಿ ಅವರು ಖಚಿತಪಡಿಸಿದ್ದಾರೆ.
ಈ ಬಗ್ಗೆ ಆಪ್ ಮುಖಂಡರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


