ರಾಹುಲ್ ಹೇಳಿಕೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ವೆಂಕಯ್ಯನಾಯ್ಡು
ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ಕೇಂದ್ರ ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಿಡಿ ಕಾರಿದ್ದಾರೆ.

ನವದೆಹಲಿ: ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ಕೇಂದ್ರ ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಿಡಿ ಕಾರಿದ್ದಾರೆ.
ಪ್ರಜಾಪ್ರಭುತ್ವ ಮತ್ತು ಮೂಲಭೂತ ಹಕ್ಕುಗಳ ಬಗ್ಗೆ ರಾಹುಲ್ ಮಾತು ಕೇಳುತ್ತಿದ್ದರೇ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
1975 ರಲ್ಲಿ ಕಾಂಗ್ರೆಸ್ ಸರ್ಕಾರ ತುರ್ತಪ ಪರಿಸ್ಥಿತಿ ಜಾರಿಗೆ ತಂದು ದೇಶಕ್ಕಾಗಿ ಏನು ಮಾಡಿತು ಎಂಬುದನ್ನು ನೆನಪಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಎನ್ ಡಿ ಟಿವಿ ಇಂಡಿಯಾ ಚಾನೆಲ್ ಮೇಲೆ ಒಂದು ನಿಷೇಧ ಹೇರಿದ್ದಕ್ಕೆ ರಾಹುಲ್ ಗಾಂಧಿ ಮೂಲಭೂತ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ, ಆದರೆ ಯುಪಿಎ ಸರ್ಕಾರದ ಅವಧಿಯಲ್ಲಿ 21 ಚಾನೆಲ್ ಗಳನ್ನು ನಿಷೇಧಿಸಿರುವುದು ಮರೆತು ಹೋಯಿುತೆ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


