ಗೋ ಹತ್ಯೆ ಪ್ರಕರಣದಲ್ಲಿ ಇಬ್ಬರಿಗೆ ಐದು ವರ್ಷ ಜೈಲು ಶಿಕ್ಷೆ
2007ರಲ್ಲಿ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ...

Published On :
ಮುಜಾಫರನಗರ: 2007ರಲ್ಲಿ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೋಜ್ ಕುಮಾರ್ ಅವರು, ಅಪರಾಧಿಗಳಾದ ಇಸ್ರೈಲ್ ಮತ್ತು ಮೋನುಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ತಲಾ ಒಂದು ಸಾವಿರ ರುಪಾಯಿ ತಂಡ ವಿಧಿಸಿದ್ದಾರೆ.
ಸರ್ಕಾರಿ ಅಭಿಯೋಜಕ ಜಾವೇದ್ ಅಲಿ ಪ್ರಕಾರ, ಆಗಸ್ಟ್ 20, 2007ರಲ್ಲಿ ಅಝಿಜ್ ಪುರ ಗ್ರಾಮದಲ್ಲಿರುವ ಇಸ್ರೈಲ್ ಮತ್ತು ಮೋನು ಮನೆ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮನೆಯಲ್ಲಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ ಈ ಸಂಬಂಧ ಇಬ್ಬರ ವಿರುದ್ಧ ಗೋಹತ್ಯೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


