ದೇಶ

ಯುಎನ್ಎಸ್ ಸಿ ಸದಸ್ಯತ್ವ ಪಡೆಯುವ ಯತ್ನ ಅಧಿಕಾರ ದಾಹವನ್ನು ತೋರುತ್ತದೆ: ಪಾಕ್

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸುಧಾರಣೆ ಪ್ರಕ್ರಿಯೆ ಮೂಲಕ ಕಾಯಂ ಸದಸ್ಯ ರಾಷ್ಟ್ರಗಳನ್ನು ಹೆಚ್ಚಿಸುವುದಕ್ಕೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿದೆ.

ಯುಎನ್ಎಸ್ ಸಿ ಸದಸ್ಯತ್ವ ಪಡೆಯುವ ಯತ್ನ ಅಧಿಕಾರ ದಾಹವನ್ನು ತೋರುತ್ತದೆ: ಪಾಕ್
ಯುಎನ್ಎಸ್ ಸಿ ಸದಸ್ಯತ್ವ
Published On :
ನವದೆಹಲಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಸುಧಾರಣೆ ಪ್ರಕ್ರಿಯೆ ಮೂಲಕ ಕಾಯಂ ಸದಸ್ಯ ರಾಷ್ಟ್ರಗಳನ್ನು ಹೆಚ್ಚಿಸುವುದಕ್ಕೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿದ್ದು, ಕಾಯಂ ಸದಸ್ಯತ್ವವನ್ನು ಹೆಚ್ಚಿಸುವುದರಿಂದ ಕೇವಲ ಕೆಲವು ರಾಷ್ಟ್ರಗಳ ಅಧಿಕಾರ ದಾಹವನ್ನು ಈಡೇರಿಸಿದಂತಾಗುತ್ತದೆ ಎಂದು ಹೇಳಿದೆ. 
ಕಾಯಂ ಸದಸ್ಯ ರಾಷ್ಟ್ರಗಳ ಸಂಖ್ಯೆಯನ್ನು ಹೆಚ್ಚಿಸುವುದರಿಂದ ಕೇವಲ ಅಧಿಕಾರ ದಾಹವನ್ನು ಈಡೇರಿಸಿದಂತಾಗುತ್ತದೆ, ಪ್ರಾತಿನಿಧ್ಯ ಸಮಸ್ಯೆಯನ್ನು ಬಗೆಹರಿಸಿದಂತಾಗುವುದಿಲ್ಲ ಎಂದು ಭದ್ರತಾ ಮಂಡಳಿ ಸುಧಾರಣಾ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ವಿಶ್ವಸಂಸ್ಥೆಯಲ್ಲಿರುವ ಪಾಕಿಸ್ತಾನದ ರಾಯಭಾರಿ ಮಲಿಹಾ ಲೋಧಿ ಅಭಿಪ್ರಾಯಪಟ್ಟಿದ್ದಾರೆ. 
ಭಾರತ ಸೇರಿದಂತೆ ಜಿ-4 ರಾಷ್ಟ್ರಗಳಾದ ಬ್ರೆಜಿಲ್, ಜರ್ಮನಿ, ಜಪಾನ್ ರಾಷ್ಟ್ರಗಳು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಪಡೆಯಲು ಯತ್ನಿಸುತ್ತಿದೆ. ಆದರೆ ಭಾರತದ ಸದಸ್ಯತ್ವಕ್ಕೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸುತ್ತಿದ್ದು ಅಧಿಕಾರ ದಾಹವನ್ನು ತೋರುತ್ತದೆ ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.