ದೇಶ

ಮಾಲಿನ್ಯ ವಿಚಾರದಲ್ಲಿ ದೆಹಲಿ ಅತ್ಯಂತ ಕೆಟ್ಟ ನಗರ: ಹೈಕೋರ್ಟ್

ರಾಷ್ಟ್ರರಾಜಧಾನಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾಗಿರುವ ದೆಹಲಿ ಸರ್ಕಾರ ಹಾಗೂ ಇತರೆ ಸಂಸ್ಥೆಗಳನ್ನು ತೀವ್ರ ತರಾಟೆಗೆ...

ಮಾಲಿನ್ಯ ವಿಚಾರದಲ್ಲಿ ದೆಹಲಿ ಅತ್ಯಂತ ಕೆಟ್ಟ ನಗರ: ಹೈಕೋರ್ಟ್
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾಗಿರುವ ದೆಹಲಿ ಸರ್ಕಾರ ಹಾಗೂ ಇತರೆ ಸಂಸ್ಥೆಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ದೆಹಲಿ ಹೈಕೋರ್ಟ್, ವಾಯು ಮಾಲಿನ್ಯ ವಿಚಾರದಲ್ಲಿ ದೇಶದಲ್ಲಿಯೇ ದೆಹಲಿ ಅತ್ಯಂತ ಕೆಟ್ಟ ನಗರ ಎಂದಿದೆ.
ದೀಪಾವಳಿಗೂ ಮುನ್ನವೇ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿತ್ತು. ಆದರೆ ಹಬ್ಬದ ನಂತರ ಅದು ಮತ್ತಷ್ಟು ತೀವ್ರ ಸ್ವರೂಪ ಪಡೆಯಿತು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಮಧ್ಯೆ, ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವುದಕ್ಕಾಗಿ 10 ವರ್ಷದ ಹಳೆಯ ಡೀಸೆಲ್ ವಾಹನ ಹಾಗೂ 15 ವರ್ಷದ ಹಳೆಯ ಪೆಟ್ರೋಲ್ ವಾಹನಗಳ ನಿಷೇಧಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ತಡೆ ನೀಡಿದೆ.
ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ, ದೆಹಲಿ ಸರ್ಕಾರ ಹಾಗೂ ನೆರೆಯ ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ ಮತ್ತು ಹರಿಯಾಣ ಸೇರಿದಂತೆ ಒಂದು ಏಕಿಕೃತ ರಾಜ್ಯ ಮಟ್ಟದ ಸಮಿತಿ ರಚಿಸಬೇಕು ಎಂದು ಎನ್ ಜಿಟಿ ಸೂಚಿಸಿದೆ. ಅಲ್ಲದೆ ತಾತ್ಕಾಲಿಕವಾಗಿ ಎಲ್ಲಾ ಕಲ್ಲಿದ್ದಲು ವಿದ್ಯುತ್ ಸ್ಛಾವರಗಳನ್ನು ಮತ್ತು ನಿರ್ಮಾಣ ಕಾಮಗಾರಿಗಳನ್ನು ಸ್ಥಗಿಗೊಳಿಸುವಂತೆ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.