500, 1000 ರೂ ನೋಟುಗಳ ರದ್ದತಿ ಕ್ರಮವನ್ನು ಶ್ಲಾಘಿಸಿದ ನಾರಾಯಣ ಮೂರ್ತಿ
500 ಹಾಗೂ 1000 ರೂ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವುದು ಅತ್ಯದ್ಭುತವಾದ ಕ್ರಮ ಎಂದು ಇನ್ ಫೋಸಿಸ್ ಸ್ಥಾಪಕ ಉದ್ಯಮಿ ನಾರಾಯಣ ಮೂರ್ತಿ ಹೇಳಿದ್ದಾರೆ.

Published On :
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಯಾವಾಗಲೂ ಸಮರ್ಥವಾಗಿ ಹೋರಾಡುತ್ತಿದ್ದು, 500 ಹಾಗೂ 1000 ರೂ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವುದು ಅತ್ಯದ್ಭುತವಾದ ಕ್ರಮ ಎಂದು ಇನ್ ಫೋಸಿಸ್ ಸ್ಥಾಪಕ ಉದ್ಯಮಿ ನಾರಾಯಣ ಮೂರ್ತಿ ಹೇಳಿದ್ದಾರೆ.
ಎಕನಾಮಿಕ್ ಟೈಮ್ಸ್ ಗೆ ನೀಡಿರುವ ಚುಟುಕು ಸಂದರ್ಶನದಲ್ಲಿ ಮಾತನಾಡಿರುವ ನಾರಾಯಣ ಮೂರ್ತಿ, ಭಯೋತ್ಪಾದನೆ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಕೈಗೊಂಡಿರುವ ಈ ಕ್ರಮ ಶ್ಲಾಘನೀಯವಾದದ್ದು, ಯೋಗ್ಯ ಆರ್ಥಿಕ ಪ್ರಗತಿ ಸಾಧಿಸಬೇಕಾದರೆ ಇಂಥಹ ಕ್ರಮ ಅಗತ್ಯವಿದ್ದು ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಕಪ್ಪುಹಣ ಹೊಂದಿರದ ಸಾಮಾನ್ಯ ಜನತೆ ನೋಟುಗಳನ್ನು ಬದಲಿಸಿಕೊಳ್ಳಲು ಕೇಂದ್ರ ಸರ್ಕಾರ ಹಲವು ಮಾರ್ಗಗಳನ್ನು ಸೂಚಿಸಿದೆ. ಪ್ರಾಮಾಣಿಕ ವ್ಯಕ್ತಿಗಳು ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತಿಸುತ್ತಿದ್ದಾರೆ, ಅಪ್ರಮಾಣಿಕ ವ್ಯಕ್ತಿಗಳು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿNarayana Murthyನಾರಾಯಣ ಮೂರ್ತಿ500500 and Rs 1000 notesdemonetization1000 ರೂ ನೋಟು ರದ್ದತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


