ಪ್ರಧಾನಿ ಮೋದಿ ಪೇಟಿಎಂ ಜಾಹಿರಾತಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ನಾಚಿಕೆಗೇಡು: ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ಭಾವಚಿತ್ರವನ್ನು ಖಾಸಗಿ ಸಂಸ್ಥೆ ಬಳಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

Published On :
ನವದೆಹಲಿ: ಆನ್ಲೈನ್ ಪಾವತಿ ಸಂಸ್ಥೆ ಪೇಟಿಎಂ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಬಳಕೆ ಮಾಡುತ್ತಿರುವುದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ಭಾವಚಿತ್ರವನ್ನು ಖಾಸಗಿ ಸಂಸ್ಥೆ ಬಳಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.
ಜನರು ತಮ್ಮ ಪ್ರಧಾನಿ ಖಾಸಗಿ ಸಂಸ್ಥೆಯ ಮಾಡೆಲ್ ಆಗಿರಲಿ ಎಂದು ಬಯಸುತ್ತಿದ್ದಾರಾ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ, ಮುಂದೊಂದು ದಿನ ಇದೇ ಸಂಸ್ಥೆಗಳು ತಪ್ಪು ಮಾಡಿದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವವರು ಯಾರು ಎಂದು ಕೇಜ್ರಿವಾಲ್ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
ಪೇಟಿಎಂ 500, 1000 ರೂ ರದ್ದುಗೊಂಡಿರುವುದರ ಫಲಾನುಭವಿಯಾಗಿದ್ದು, ನೋಟುಗಳು ರದ್ದುಗೊಂಡ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಪೇಟಿಎಂ ಜಾಹಿರಾತಿನಲ್ಲಿ ಕಾಣಿಸಿಕೊಂದಿದ್ದಾರೆ, ಇದರಲ್ಲಿ ಏನು ಒಪ್ಪಂದವಾಗಿ ಪ್ರಧಾನಿಗಳೇ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. 500, 1000 ರೂ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿರುವ ಕ್ರಮವನ್ನು ಆಮ್ ಆದ್ಮಿ ಪಕ್ಷ ತುಘಲಕ್ ಆಡಳಿತದ ಆದೇಶ ಎಂದು ಲೇವಡಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


