ಜಮ್ಮು: ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ- 5 ಬಸ್'ಗಳು ಸಂಪೂರ್ಣ ಭಸ್ಮ
ಜಮ್ಮುವಿನ ವೇರ್ಹೌಸ್ ಪ್ರದೇಶದಲ್ಲಿದ್ದ ಬಸ್ ನಿಲ್ದಾಣವೊಂದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 5 ಬಸ್ ಗಳು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಗುರುವಾರ...

ಜಮ್ಮು: ಜಮ್ಮುವಿನ ವೇರ್ಹೌಸ್ ಪ್ರದೇಶದಲ್ಲಿದ್ದ ಬಸ್ ನಿಲ್ದಾಣವೊಂದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 5 ಬಸ್ ಗಳು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿದ್ದ 25 ಬಸ್ ಗಳನ್ನು ಸ್ಥಳಾಂತಗೊಳಿಸಿದ್ದಾರೆಂದು ತಿಳಿದುಬಂದಿದೆ.
ಕಳೆದ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, 5 ಬಸ್ ಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಕಾರ್ಯಾಚರಣೆ ನಡೆಸುವ ಮೂಲಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಯಾವುದೇ ರೀತಿಯ ಸಾವು-ನೋವುಗಳ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


