ಹರ್ಯಾಣಕ್ಕೆ ನೀರು ಹರಿಸುವಂತೆ ಸುಪ್ರೀಂ ತೀರ್ಪು; ಪಂಜಾಬ್ "ಕೈ" ಶಾಸಕರ ಸಾಮೂಹಿಕ ರಾಜಿನಾಮೆ!
ಹರ್ಯಾಣಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ವಿರೋಧಿಸಿ ಪಂಜಾಬ್ ಕಾಂಗ್ರೆಸ್ ಘಟಕದ ಎಲ್ಲ ಶಾಸಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

ಜಲಂಧರ್: ಹರ್ಯಾಣಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ವಿರೋಧಿಸಿ ಪಂಜಾಬ್ ಕಾಂಗ್ರೆಸ್ ಘಟಕದ ಎಲ್ಲ ಶಾಸಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ಕಾವೇರಿ ವಿವಾದಂತೆಯೇ ಅತ್ತ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿವಾದ ತಾರಕಕ್ಕೇರಿದ್ದು, ಹರ್ಯಾಣ ರಾಜ್ಯಕ್ಕೆ ನೀರು ಹರಿಸುವಂತೆ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಕಾಂಗ್ರೆಸ್ ಸಂಸದ ಅಮರಿಂದರ್ ಸಿಂಗ್ ತಮ್ಮ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರೂ ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.
ಅಂತೆಯ ಪಕ್ಷೇತರ ಶಾಸಕ ರಜನೀಶ್ ಬಾಬ್ಬಿ ಅವರು ಕೂಡ ರಾಜಿನಾಮೆ ಸಲ್ಲಿಕೆ ಮಾಡಿದ್ದು, ಪಂಜಾಬ್ ನಲ್ಲಿ ಇದೀಗ ರಾಜಕೀಯ ಬಿಕ್ಕಟ್ಟು ಎದುರಾಗಿದೆ.
ಏನಿದು ವಿವಾದ?
2003ರಲ್ಲಿ ಸಟ್ಲೇಜ್-ಯಮುನಾ ನದಿಗೆ ಕಾಲುವೆ ನಿರ್ಮಿಸಿ ಅದರ ಮೂಲಕ ಹರ್ಯಾಣ ರಾಜ್ಯಕ್ಕೆ ನೀರು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಇದಕ್ಕೆ ಪಂಜಾಬ್ ನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅಂತಿಮವಾಗಿ ಅಮರಿಂದರ್ ಸಿಂಗ್ ನೇತೃತ್ವ ಕಾಂಗ್ರೆಸ್ ಸರ್ಕಾರ 2004ರಲ್ಲಿ ಹರ್ಯಾಣ ರಾಜ್ಯದೊಂದಿಗಿನ ನೀರು ಹಂಚಿಕೆ ಒಪ್ಪಂದವನ್ನು ಕೊನೆಗೊಳಿಸುವ ಮಸೂದೆಯನ್ನು ರಚಿಸಿತ್ತು. ಇದು ವಿಧಾನಸಭೆಯಲ್ಲೂ ಅಂಗೀಕಾರವಾಗಿತ್ತು. ಇದೀಗ ಮತ್ತೆ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಹರ್ಯಾಣಕ್ಕೆ ನೀರು ಬಿಡುವಂತೆ ಪಂಜಾಬ್ ಸರ್ಕಾರಕ್ಕೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


