ಮೊದಲು ನಿಮ್ಮ ಮಹಾಭಾರತವನ್ನು ಮುಗಿಸಿ, ನಂತರ ಮಹಾಮೈತ್ರಿ ಬಗ್ಗೆ ಚಿಂತಿಸಿ: ಸಮಾಜವಾದಿ ಪಕ್ಷಕ್ಕೆ ಬಿಜೆಪಿ
ಮೊದಲು ನಿಮ್ಮ ಕುಟುಂಬದಲ್ಲಿ ನಡೆಯುತ್ತಿರುವ ಮಹಾಭಾರತಕ್ಕೆ ಅಂತ್ಯ ಹಾಡಿ ನಂತರ ಮಹಾಮೈತ್ರಿ ಬಗ್ಗೆ ಚಿಂತನೆ ನಡೆಸಿ ಎಂದು ಸಮಾಜವಾದಿ ಪಕ್ಷದ ನಾಯಕರಿಗೆ...

ನವದೆಹಲಿ: ಮೊದಲು ನಿಮ್ಮ ಕುಟುಂಬದಲ್ಲಿ ನಡೆಯುತ್ತಿರುವ ಮಹಾಭಾರತಕ್ಕೆ ಅಂತ್ಯ ಹಾಡಿ ನಂತರ ಮಹಾಮೈತ್ರಿ ಬಗ್ಗೆ ಚಿಂತನೆ ನಡೆಸಿ ಎಂದು ಸಮಾಜವಾದಿ ಪಕ್ಷದ ನಾಯಕರಿಗೆ ಬಿಜೆಪಿ ಶುಕ್ರವಾರ ಹೇಳಿದೆ.
ಸಮಾಜವಾದಿ ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟು ಕುರಿತಂತೆ ಮಾತನಾಡಿರುವ ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ಅವರು, ಸಮಾಜವಾದಿ ಪಕ್ಷದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಿದ್ದು, ತಮ್ಮ ಕುಟುಂಬದಲ್ಲಿ ಮಹಾಭಾರತ ನಡೆಯುತ್ತಿದ್ದರೂ, ಮಹಾಮೈತ್ರಿ ಬಗ್ಗೆ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ಸಮಾಜವಾದಿ ಪಕ್ಷ ಮೊದಲು ತಮ್ಮೊಳಗೆ ನಡೆಯುತ್ತಿರುವ ಮಹಾಭಾರತಕ್ಕೆ ಅಂತ್ಯ ಹಾಡಬೇಕಿದ್ದು, ನಂತರ ಮಹಾಮೈತ್ರಿ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳು ಮೂಲೆಗೆ ಸೇರಿವೆ. ಮೊದಲು ಸಮಾಜವಾದಿ ಪಕ್ಷ ರಾಜ್ಯದಲ್ಲಿ ತಲೆದೋರಿರುವ ಸಮಸ್ಯೆಗಳನ್ನು ಸರಿಪಡಿಸಬೇಕಿದ್ದು, ನಂತರವಷ್ಟೇ ರಾಷ್ಟ್ರೀಯ ಹಿತಾಸಕ್ತಿಗಳ ಬಗ್ಗೆ ಮಾತನಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


