ದೇಶ

ಬಿಹಾರ: ಗುಂಡು ಹಾರಿಸಿ ದೈನಿಕ್ ಭಾಸ್ಕರ್ ಪತ್ರಕರ್ತನ ಹತ್ಯೆ

ಹಿಂದಿ ಸುದ್ದಿ ಪತ್ರಿಕೆಯ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಬಿಹಾರ ರಾಜ್ಯದ ರೋಹ್ಟಸ್ ಜಿಲ್ಲೆಯ ಸಸಾರಾಂನಲ್ಲಿ ಶನಿವಾರ ನಡೆದಿದೆ...

ಬಿಹಾರ: ಗುಂಡು ಹಾರಿಸಿ ದೈನಿಕ್ ಭಾಸ್ಕರ್ ಪತ್ರಕರ್ತನ ಹತ್ಯೆ
ಸಾಂದರ್ಭಿಕ ಚಿತ್ರ
Published On :

ರೋಹ್ಟಸ್: ಹಿಂದಿ ಸುದ್ದಿ ಪತ್ರಿಕೆಯ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಬಿಹಾರ ರಾಜ್ಯದ ರೋಹ್ಟಸ್ ಜಿಲ್ಲೆಯ ಸಸಾರಾಂನಲ್ಲಿ ಶನಿವಾರ ನಡೆದಿದೆ.

ದೈನಿಕ್ ಭಾಸ್ಕರ್ ಪತ್ರಿಕೆಯ ಪತ್ರಕರ್ತ ಧರ್ಮೇಂದ್ರ ಸಿಂಗ್ ಎಂಬುವವರನ್ನು ಹತ್ಯೆ ಮಾಡಲಾಗಿದೆ. ಇಂದು ಬೆಳಿಗ್ಗೆ ಮನೆಯ ಪಕ್ಕದಲ್ಲಿಯೇ ಇದ್ದ ಟೀ ಅಂಗಡಿ ಬಳಿ ಧರ್ಮೇಂದ್ರ ಸಿಂಗ್ ಅವರು ನಿಂತಿದ್ದ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿರುವ ಮೂವರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಮ್ರಾ ಲೇಕ್ ಬಳಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಗುಂಡಿನ ದಾಳಿ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಧರ್ಮೇಂದ್ರ ಸಿಂಗ್ ಅವರನ್ನು ಸ್ಥಳೀಯರು ಸಸಾರಾಂ ಸರ್ದಾರ್ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ವಾರಣಾಸಿಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಈ ವೇಳೆ ವಾರಣಾಸಿಗೆ ಕರೆದೊಯ್ಯುತ್ತಿರುವಾಗ ಮಾರ್ಗದ ಮಧ್ಯೆಯೇ ಧರ್ಮೇಂದ್ರ ಅವರು ಕೊನೆಯುಸಿರೆಳೆದಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.