ಕಪ್ಪುಹಣದ ವಿರುದ್ಧ ಸರ್ಜಿಕಲ್ ಸ್ಟ್ರೈಕ್: 600 ಮಳಿಗೆಗಳಿಂದ ಚಿನ್ನ ಮಾರಾಟ ವಿವರಣೆ ಕೇಳಿದ ಅಬಕಾರಿ ಇಲಾಖೆ!
ಕೇಂದ್ರ ಸರ್ಕಾರ ಕಪ್ಪುಹಣದ ವಿರುದ್ಧ ಸಾರಿರುವ ಸಮರವನ್ನು ಮುಂದಿನ ಹಂತಕ್ಕೆ ಕೊಂಡೊಯ್ದಿದ್ದು, ಕಳೆದ ನಾಲ್ಕು ದಿನಗಳಲ್ಲಿ(ನ.7) ರಿಂದ ಚಿನ್ನಾಭರಣಗಳ ಮಾರಾಟದ ವಿವರಗಳನ್ನು ನೀಡುವಂತೆ 600 ಚಿನ್ನಾಭರಣ ಮಳಿಗೆಗಳಿಗೆ ಅಬಕಾರಿ ಇಲಾಖೆ ಸೂಚನೆ ನೀಡಿದೆ.

Published On :
ನವದೆಹಲಿ: ಕೇಂದ್ರ ಸರ್ಕಾರ ಕಪ್ಪುಹಣದ ವಿರುದ್ಧ ಸಾರಿರುವ ಸಮರವನ್ನು ಮುಂದಿನ ಹಂತಕ್ಕೆ ಕೊಂಡೊಯ್ದಿದ್ದು, ಕಳೆದ ನಾಲ್ಕು ದಿನಗಳಲ್ಲಿ(ನ.7) ರಿಂದ ಚಿನ್ನಾಭರಣಗಳ ಮಾರಾಟದ ವಿವರಗಳನ್ನು ನೀಡುವಂತೆ 600 ಚಿನ್ನಾಭರಣ ಮಳಿಗೆಗಳಿಗೆ ಅಬಕಾರಿ ಇಲಾಖೆ ಸೂಚನೆ ನೀಡಿದೆ.
ವರದಿಗಳ ಪ್ರಕಾರ 25 ನಗರಗಳಲ್ಲಿ ಕೇಂದ್ರ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ನಾಲ್ಕು ದಿನಗಳಲ್ಲಿ ಮಾರಾಟವಾಗಿರುವ ಒಟ್ಟು ಚಿನ್ನಾಭರಣಗಳ ಸಂಪೂರ್ಣ ವಿವರಗಳನ್ನು ನೀಡುವಂತೆ ಕೇಂದ್ರ ಅಬಕಾರಿ ಗುಪ್ತಚಹರ ಇಲಾಖೆಯ ಪ್ರಧಾನ ನಿರ್ದೇಶಕ ಕಚೇರಿಯ ಅಧಿಕಾರಿಗಳು ಚಿನ್ನಾಭರಣ ಮಳಿಗೆಗಳಿಗೆ ನೊಟೀಸ್ ಜಾರಿ ಮಾಡಲಾಗಿದೆ.
ಕಾರ್ಯಾಚರಣೆ ಭಾಗವಾಗಿ ಪ್ರಮುಖ ಚಿನ್ನಾಭರಣ ಮಳಿಗೆ, ಚಿನ್ನಾಭರಣಗಳ ಉತ್ಪಾದಕ ಘಟಕಗಳಿಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, 4 ದಿನಗಳಲ್ಲಿ ಮಾರಾಟಾವಾಗಿರುವ ಒಟ್ಟು ಚಿನ್ನ ಹಾಗೂ ದಾಸ್ತಾನು ಮಾಡಲಾಗಿರುವ ಚಿನ್ನದ ಬಗ್ಗೆ ವಿವರಣೆ ಪಡೆಯಲಿದ್ದಾರೆ.
ದೆಹಲಿ, ಮುಂಬೈ, ಕೋಲ್ಕತಾ, ಚೆನ್ನೈ, ಅಹಮದಾಬಾದ್, ಬೆಂಗಳೂರು, ಹೈದರಾಬಾದ್, ಭೋಪಾಲ್, ವಿಜಯವಾಡ, ನಾಸಿಕ್ ಹಾಗೂ ಲಖನೌ ನಗರಗಳ ಮೇಲೆ ಡಿಜಿಸಿಇಐ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬೇರೆ ನಗರಗಳ ಮೇಲೂ ಸಹ ಅಧಿಕಾರಿಗಳು ನಿಗಾವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಚಿನ್ನ ಖರೀದಿಸುವ ಗ್ರಾಹಕರ ಪ್ಯಾನ್ ಕಾರ್ಡ್ ಮಾಹಿತಿ ಪಡೆದು ಚಿನ್ನಾಭರಣಗಳನ್ನು ಮಾರಾಟ ಮಾಡುವಂತೆ ಹಣಕಾಸು ಸಚಿವಾಲಯ ಸೂಚನೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


