ದೇಶ

ನೋಟು ರದ್ದತಿ ಹಿಂದೆ ಹಗರಣ: ಕೇಜ್ರಿವಾಲ್ ಜೊತೆ ದನಿಗೂಡಿಸಿದ ಮಮತಾ ಬ್ಯಾನರ್ಜಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೋಟು ರದ್ದು ನಿರ್ಧಾರದ ಹಿಂದೆ ಭಾರೀ ದೊಡ್ಡ ಹಗರಣವಿದೆ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆರೋಪಕ್ಕೆ ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು...

ನೋಟು ರದ್ದತಿ ಹಿಂದೆ ಹಗರಣ: ಕೇಜ್ರಿವಾಲ್ ಜೊತೆ ದನಿಗೂಡಿಸಿದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Published On :
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೋಟು ರದ್ದು ನಿರ್ಧಾರದ ಹಿಂದೆ ಭಾರೀ ದೊಡ್ಡ ಹಗರಣವಿದೆ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆರೋಪಕ್ಕೆ ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ದನಿಗೂಡಿಸಿದ್ದಾರೆ. 
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವನರು, ರು.500 ಹಾಗೂ 1,000 ಮುಖಬೆಲೆಯ ದುಬಾರಿ ನೋಟು ಮೇಲಿನ ನಿಷೇಧ ಹೇರಿಕೆಯಿಂದಾಗಿ ಕೇವಲ ಸಾಮಾನ್ಯ ಜನರಿಗಷ್ಟೇ ಸಂಕಷ್ಟ ಎದುರಾಗಿದೆ. ಕಾಳಧನಿಕರಿಗೆ ಇದು ಸಹಾಯಕವಾಗಿದೆ ಎಂದು ಹೇಳಿದ್ದಾರೆ. 
ಈ ಮಾತನ್ನು ನಾನು ಈ ಹಿಂದೆಯೇ ಹೇಳಿದ್ದೆ. ಕೇಂದ್ರ ಸರ್ಕಾರ ಈ ನಿರ್ಧಾರಯ ಯುವಕರು, ವೃದ್ಧರು ಹಾಗೂ ಪ್ರತೀಯೊಬ್ಬರಿಗೂ ಕಷ್ಟವನ್ನು ಎದುರಿಸುವಂತೆ ಮಾಡಿದೆ. ಕೇಂದ್ರದ ಈ ನಿರ್ಧಾರದಿಂದ ಭಾರತದೆಲ್ಲೆಡೆ ವ್ಯಾಪಾರ ವಹಿವಾಟುಗಳ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯುತ್ ಖರೀದಿ ಸಾಧ್ಯವಾಗುತ್ತಿಲ್ಲ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಜನರಿಗೆ ಕಷ್ಟ ಎದುರಾಗಿದೆ.  ಹೀಗಾಗಿ ತನ್ನ ಕೆಟ್ಟ ರಾಜಕೀಯ ನಿರ್ಧಾರವನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಈ ಮೂಲಕ ಆಗ್ರಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. 
ರು.500 ಹಾಗೂ 1,000 ನೋಟುಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಕೇಂದ್ರ ಸರ್ಕಾರ ನಿರ್ಧಾರದ ಕುರಿತಂತೆ ಈ ಹಿಂದೆ ಕಿಡಿಕಾರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧದ ಹೋರಾಟದ ಹೆಸರಿನಲ್ಲಿ ಎನ್ ಡಿಎ ಸರ್ಕಾರ ದೊಡ್ಡ ಹಗರಣ ನಡೆಸಿದ್ದು, ಪ್ರಧಾನಿ ಮೋದಿ ಈ ನಿರ್ಧಾರವನ್ನು ಘೋಷಿಸುವುದಕ್ಕೂ ಮುನ್ನವೇ ಕಪ್ಪುಹಣ ಹೊಂದಿರುವ ತಮ್ಮ ಕೆಲವು ಆಪ್ತರಿಗೆ ಮಾಹಿತಿಯನ್ನು ನೀಡಿದ್ದರು, ಆದ್ದರಿಂದ ಕೇಂದ್ರ ಸರ್ಕಾರದ ನೋಟ್ ರದ್ದತಿಯಿಂದ ಉಂಟಾಗಬೇಕಿದ್ದ ಪರಿಣಾಮದಿಂದ ಭ್ರಷ್ಟರು, ಕಪ್ಪುಹಣ ಹೊಂದಿರುವವರು ತಪ್ಪಿಸಿಕೊಂಡಿದ್ದಾರೆಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.