ಟೂರ್ನಿಗೆಂದು 10ನೇ ತರಗತಿ ವಿದ್ಯಾರ್ಥಿನಿಯರನ್ನು ಕರೆದ್ಯೊಯ್ದು ಅತ್ಯಾಚಾರ ಮಾಡಿದ ದೈಹಿಕ ಶಿಕ್ಷಕ
ರಾಷ್ಟ್ರೀಯ ಮಟ್ಟದ ಬ್ಯಾಸ್ಕೆಟ್ ಬಾಲ್ ಟೂರ್ನಿಮೆಂಟ್ ಎಂದು ಹೇಳಿ 10ನೇ ತರಗತಿ ವಿದ್ಯಾರ್ಥಿಗಳನ್ನು ಕರೆದ್ಯೊಯ್ದ ದೈಹಿಕ ಶಿಕ್ಷಕ ಅತ್ಯಾಚಾರ ನಡೆಸಿರುವ ಪ್ರಕರಣ...

Published On :
ತಿರುಚಿ: ರಾಷ್ಟ್ರೀಯ ಮಟ್ಟದ ಬ್ಯಾಸ್ಕೆಟ್ ಬಾಲ್ ಟೂರ್ನಿಮೆಂಟ್ ಎಂದು ಹೇಳಿ 10ನೇ ತರಗತಿ ವಿದ್ಯಾರ್ಥಿಗಳನ್ನು ಕರೆದ್ಯೊಯ್ದ ದೈಹಿಕ ಶಿಕ್ಷಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಷಣ್ಮುಗ ನಗರದ ಮೆಟ್ರಿಕುಲೇಷನ್ ಶಾಲೆಯ ದೈಹಿಕ ಶಿಕ್ಷಕ 32 ವರ್ಷದ ದಿನೇಶ್ ಎಂಬಾತ ಟೂರ್ನಿಮೆಂಟ್ ಹೆಸರಲ್ಲಿ ವಿದ್ಯಾರ್ಥಿನಿಯರನ್ನು ಸೆಲಂಗೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದ. ಈ ವೇಳೆ ಶಿಕ್ಷಕಿಯೊಬ್ಬರು ಜತೆಗೆ ಬಂದಿದ್ದು ರೈಲ್ವೆ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ದಿನೇಶ್ ಮಳೆಯಿಂದಾಗಿ ಪಂದ್ಯ ರದ್ದುಗೊಂಡಿದ್ದು ತಾನು ವಿದ್ಯಾರ್ಥಿನಿಯರನ್ನು ಮನೆಗೆ ಬಿಡುವುದಾಗಿ ಹೇಳಿ ನೀವು ಮನೆಗೆ ತೆರಳುವಂತೆ ತಿಳಿಸಿದ್ದಾನೆ. ಕೂಡಲೇ ಜತೆಗೆ ಬಂದಿದ್ದ ಶಿಕ್ಷಕಿ ಮನೆಗೆ ತೆರಳಿದ್ದಾರೆ.
ಇತ್ತ ದಿನೇಶ್ ವಿದ್ಯಾರ್ಥಿನಿಯರಿಗೆ ಟೂರ್ನಿ ವೆಲಂಕಣಿಗೆ ವರ್ಗಾವಣೆಗೊಂಡಿರುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಲಾರ್ಡ್ಜ್ ವೊಂದರಲ್ಲಿ ಕೋಣೆ ತೆಗೆದುಕೊಂಡು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ ಅದನ್ನು ವಿಡಿಯೋ ಮಾಡಿಕೊಂಡಿದ್ದು ಈ ವಿಚಾರವನ್ನು ಹೊರಗಡೆ ಬಾಯಿಬಿಟ್ಟರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಬಿಡುವುದಾಗಿ ಬೆದರಿಕೆಯೊಡ್ಡಿದ್ದಾನೆ.
ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಪೋಷಕರಿಗೆ ನಡೆದ ಘಟನೆಯನ್ನು ವಿವರಿಸಿದ್ದು ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ದಿನೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


