ಪಾಕಿಸ್ತಾನದ ಪರ ಬೇಹುಗಾರಿಕೆ: ಇಬ್ಬರ ಬಂಧನ
ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್'ದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಲಾಗಿದೆ...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್'ದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.
ಸತ್ವಿಂದರ್ ಸಿಂಗ್ ಹಾಗೂ ದಾದು ಬಂಧಿತ ವ್ಯಕ್ತಿಗಳಾಗಿದ್ದಾರೆ. ಬಂಧಿತ ವ್ಯಕ್ತಿಗಳು ಅಂತರಾಷ್ಟ್ರೀಯ ಗಡಿ ಕಾಯುತ್ತಿದ್ದ ಭಾರತೀಯ ಸೇನೆಯ ಫೋಟೋಗಳನ್ನು ತೆಗೆದು, ಭದ್ರತೆ ಕುರಿತ ಸೂಕ್ಷ್ಮ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ಕೂಡಲೇ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ.
ವಿಚಾರಣೆ ವೇಳೆ ಇಬ್ಬರು ತಪ್ಪೊಪ್ಪಿಕೊಂಡಿದ್ದು, ಭಾರತೀಯ ಸೇನೆಯ ಕೇಂದ್ರಗಳು ಹಾಗೂ ಗಡಿಯಲ್ಲಿರುವ ಭದ್ರತೆ ಕುರಿತಂತೆ ಮಾಹಿತಿ ಸಂಗ್ರಹಿಸಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದೆವು ಎಂದು ಇಬ್ಬರೂ ಒಪ್ಪಿಕೊಂಡಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಸಾಮಾಜಿಕ ಜಾಲತಾಣSocial networkPakistanಪಾಕಿಸ್ತಾನspyingಬೇಹುಗಾರಿಕೆRS Pura sectorಆರ್\'ಎಸ್ ಪುರ ಸೆಕ್ಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


