ಕಣ್ಣೀರಿಡುವ ಮೂಲಕ ಜನರ ಮೂರ್ಖರಾಗಿಸಲು ಸಾಧ್ಯವಿಲ್ಲ: ಮತ್ತೆ ಪ್ರಧಾನಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ!
ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜೆಗಳನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ...

ನವದೆಹಲಿ: ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜೆಗಳನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೋಟಿಗಾಗಿ ಸಾಲುಗಟ್ಟಿ ನಿಂತ ಪ್ರಜೆಗಳನ್ನು ಅವರು ಅವಮಾನಿಸಿದ್ದಾರೆ. ಹೀಗಾಗಿ ಕೂಡಲೇ ಅವರು ಕ್ಷಮೆಯಾಚಿಸ ಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ಕಪ್ಪುಹಣವನ್ನು ಬಿಳಿಯಾಗಿಸುವ ದೊಡ್ಡ ಕುತಂತ್ರವೇ ನೋಟುಗಳನ್ನು ನಿಷೇಧ ಯೋಜನೆ. ದೊಡ್ಡ ದೊಡ್ಡ ಉದ್ಯಮಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೋಟು ನಿಷೇಧಿಸುವ ಯೋಜನೆ ರೂಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಗೋವಾ ಕಾರ್ಯಕ್ರಮದ ಕುರಿತು ಮಾತನಾಡಿದ ಕೇಜ್ರಿವಾಲ್, ಭಾವುಕರಾಗಿ ಮಾತನಾಡುವ ಮೂಲಕ ದೇಶದ ಪ್ರಜೆಗಳನ್ನು ಪ್ರಧಾನಿ ಮೋದಿ ಮೂರ್ಖರನ್ನಾಗಿಸಲು ಯತ್ನಿಸಿದ್ದಾರೆ. ಅಲ್ಲದೆ ಬ್ಯಾಂಕುಗಳ ಮುಂದೆ ಸಾಲುಗಟ್ಟಿ ನಿಂತ ಪ್ರಜೆಗಳ ವಿರುದ್ಧ ಮಾತನಾಡುವ ಮೂಲಕ ಅವರಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಕೂಡಲೇ ಅವರು ದೇಶದ ಪ್ರಜೆಗಳ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.
ಪ್ರಧಾನಿ ಮೋದಿ ಅವರ ಈ ಕ್ರಮದಿಂದಾಗಿ ದೇಶದ ಜನತೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರಧಾನಿ ಮೋದಿ ನಡೆಯಿಂದ ದೇಶದ ಅರ್ಥವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಯಾವುದೇ ಪೂರ್ವಭಾವಿ ಸಿದ್ಧತೆಗಳಿಲ್ಲದೇ ಕೇಂದ್ರ ನಿರ್ಧಾರ ಕೈಗೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ತನ್ನ ಆದೇಶವನ್ನು ಹಿಂಪಡೆಯಬೇಕು. ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ ಪಡೆಯಲು ಇನ್ನೂ ಸಮಾಯವಕಾಶವಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಗೋವಾದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ್ದ ಪ್ರಧಾನಿ ಮೋದಿ ಭಾವಕರಾಗಿ ಮಾತನಾಡಿದ್ದರು. ಸರ್ಕಾರದ ಅಭಿವೃದ್ಧಿ ಕಾರ್ಯಗಳ ನಡುವೆಯೂ ಟೀಕೆಗಳು ಎದುರಾಗುತ್ತಿದ್ದು, ದೇಶಕ್ಕಾಗಿ ನಾನು ಮನೆ ಮತ್ತು ಕುಟುಂಬಸ್ಥರನ್ನು ತೊರೆದಿದ್ದೇನೆ ಎಂದು ಹೇಳುತ್ತಾ ಗದ್ಗಧಿತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


