ದೇಶ

ನೋಟ್ ನಿಷೇಧ: ನ.21ರವರೆಗೆ ವಿಮಾನ ನಿಲ್ದಾಗಳಲ್ಲಿ ಪಾರ್ಕಿಂಗ್ ಫೀ ಇಲ್ಲ

ದೇಶದಲ್ಲಿ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 21ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ...

ನೋಟ್ ನಿಷೇಧ: ನ.21ರವರೆಗೆ ವಿಮಾನ ನಿಲ್ದಾಗಳಲ್ಲಿ ಪಾರ್ಕಿಂಗ್ ಫೀ ಇಲ್ಲ
ಬೆಂಗಳೂರು ವಿಮಾನ ನಿಲ್ದಾಣ
Published On :
ನವದೆಹಲಿ: ದೇಶದಲ್ಲಿ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 21ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಪಾರ್ಕಿಂಗ್ ಫೀ ಸಂಗ್ರಹಿಸುವುದನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಸುಗಮ ಸಂಚಾರಕ್ಕಾಗಿ ನವೆಂಬರ್ 18ರವರೆಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸಿದ್ದ ಸರ್ಕಾರ ಇದೀಗ ನವೆಂಬರ್ 21ರವರೆಗೆ ವಿಮಾನ ನಿಲ್ದಾಗಳಲ್ಲಿ ಯಾವುದೇ ಪಾರ್ಕಿಂಗ್ ಫೀ ಇರುವುದಿಲ್ಲ ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಸ್ಪಷ್ಟಪಡಿಸಿದೆ.
ಕಳೆದ ಮಂಗಳವಾರ ದಿಢೀರ್ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಯುವುದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 500 ಹಾಗೂ 1000 ರುಪಾಯಿ ನೋಟ್ ಗಳಿಗೆ ನಿಷೇಧ ಹೇರಲಾಗಿದೆ ಎಂದು ಘೋಷಿಸಿದ್ದರು. ಅಂದಿನಿಂದ ದೇಶಾದ್ಯಂತ ಹಣಕಾಸಿನ ತಾತ್ಕಾಲಿಕ ತರ್ತು ಪರಿಸ್ಥಿತಿ ಸೃಷ್ಟಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.