ಉತ್ತರ ಪ್ರದೇಶ ಚುನಾವಣೆ: ಮಾಯಾವತಿ ವಿರುದ್ಧ ರಾಖಿ ಸಾವಂತ್ ಸ್ಪರ್ಧೆ
ಒಂದು ವೇಳೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸ್ಪರ್ದಿಸಿದರೇ ಅವರು ವಿರುದ್ಧ ಚಿತ್ರ ನಟಿ ರಾಖಿಸಾವಂತ್ ಅವರನ್ನು ...

ಲಕ್ನೋ: ಒಂದು ವೇಳೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸ್ಪರ್ದಿಸಿದರೇ ಅವರು ವಿರುದ್ಧ ಚಿತ್ರ ನಟಿ ರಾಖಿಸಾವಂತ್ ಅವರನ್ನು ಕಣಕ್ಕಿಳಿಸುವುದಾಗಿ ಕೇಂದ್ರ ಸಚಿವ ಹಾಗೂ ಆರ್‌ಪಿಐ ಪಕ್ಷದ ಮುಖಂಡ ರಾಮದಾಸ್ ಅಠವಳೆ ಹೇಳಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆರ್‌ಪಿಐ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲಿದ್ದು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮಾಯಾವತಿ ನಾಚಿಕೆಪಟ್ಟುಕೊಳ್ಳುತ್ತಿದ್ದಾರೆ. ಆದರೆ ಈ ಬಾರಿ ಅವರು ಸ್ಪರ್ಧಿಸಿದರೆ ನಮ್ಮ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ರಾಖಿ ಸಾವಂತ್ ಅವರ ಎದುರಾಳಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶದ 403 ಕ್ಷೇತ್ರಗಳ ಪೈಕಿ 200 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


