ನೋಟು ನಿಷೇಧ: ಹಣಕ್ಕಾಗಿ ಬ್ಯಾಂಕ್ ಮುಂದೆ ಕ್ಯೂ ನಿಂತ ಇಬ್ಬರ ಸಾವು
500 ಹಾಗೂ 1000 ರೂ ನೋಟು ನಿಷೇಧ ಹಿನ್ನೆಲೆಯಲ್ಲಿ ಬ್ಯಾಂಕ್ ನಲ್ಲಿ ಹಣ ವಿನಿಮಯ ಮಾಡಲು ಸರದಿ ಸಾಲಿನಲ್ಲಿ ನಿಂತ ಇಬ್ಬರು ವಯೋವೃದ್ಧರು ಸಾವನ್ನಪ್ಪಿದ್ದಾ...

ನವದೆಹಲಿ: 500 ಹಾಗೂ 1000 ರೂ ನೋಟು ನಿಷೇಧ ಹಿನ್ನೆಲೆಯಲ್ಲಿ ಬ್ಯಾಂಕ್ ನಲ್ಲಿ ಹಣ ವಿನಿಮಯ ಮಾಡಲು ಸರದಿ ಸಾಲಿನಲ್ಲಿ ನಿಂತ ಇಬ್ಬರು ವಯೋವೃದ್ಧರು ಸಾವನ್ನಪ್ಪಿದ್ದಾರೆ.
ಮಧ್ಯಪ್ರದೇಶದ ಸಾಗರದಲ್ಲಿ ಬ್ಯಾಂಕ್ ಹೊರಗಡೆ ಕ್ಯೂ ನಲ್ಲಿ ನಿಂತಿದ್ದ 69 ವರ್ಷದ ವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸಾಲಿನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿದೆ, ಕೂಡಲೇ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೂ ಚಿಕಿತ್ಸೆ ಫಲಿಸದೇ ವಿನಯ್ ಕುಮಾರ್ ಪಾಂಡೆ ಮೃತ ಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಜರಾತ್ ನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಮನ್ಷುಕ್ ದರ್ಜಿ ಎಂಬಾತ ಬ್ಯಾಂಕ್ ಹೊರಗಡೆ ಕ್ಯೂ ನಲ್ಲಿ ನಿಂತಿದ್ದರು. ಇದ್ದಕ್ಕಿದ್ದಂತೆ ಆತ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು, ಚಿಕಿತ್ಸೆ ನೀಡುವ ವೇಳೆಯೇ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಿಗೆ ರಜೆ ಎಂದು ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರು ಬಂದು ಬೆಳಗಿನಿಂದ ಸಂಜೆವರೆಗೂ ನಿಂತು ಹಣ ವಿನಿಮಯದಲ್ಲಿ ತೊಡಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


