ಬಾರಾಮುಲ್ಲಾದಲ್ಲಿ ಯೋಧರು, ಉಗ್ರರ ನಡುವೆ ಗುಂಡಿನ ಕಾಳಗ: ಓರ್ವ ಪೇದೆ ಸಾವು
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ದಾಳಿ ವೇಳೆ ಓರ್ವ ಪೇದೆ ಮೃತಪಟ್ಟಿರುವುದಾಗಿ...

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ದಾಳಿ ವೇಳೆ ಓರ್ವ ಪೇದೆ ಮೃತಪಟ್ಟಿರುವುದಾಗಿ ಬುಧವಾರ ತಿಳಿದುಬಂದಿದೆ.
ಝಲೂರ್ ಪ್ರದೇಶದ ಸಪೋರ್ ಟೌನ್ ನಲ್ಲಿ ಉಗ್ರರ ಗುಂಪೊಂದು ಅಡಗಿ ಕುಳಿತಿದ್ದು, ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಭಾರತೀಯ ಸೇನಾ ಪಡೆ ಕಾರ್ಯಾಚರಣೆಗಿಳಿದಿತ್ತು. ಕಾರ್ಯಾಚರಣೆ ವೇಳೆ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
20 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣಾ ದಳ (ಎಸ್ಒಜಿ) ಹಾಗೂ ಭಾರತೀಯ ಸೇನಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಸಪೋರ್ ಟೌನ್ ಬಳಿ ಅಡಗಿ ಕುಳಿತಿರುವ ಉಗ್ರರು ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಗುಂಡಿನ ದಾಳಿಗೆ ಸ್ಥಳದಲ್ಲಿದ್ದ ಓರ್ವ ಪೇದೆಯೊಬ್ಬರು ಮೃತಪಟ್ಟಿದ್ದಾರೆ.
ಮೃತ ಪೇದೆಯನ್ನು ಮೊಹಮ್ಮದ್ ಶಫಿ ಎಂದು ಗುರ್ತಿಸಲಾಗಿದೆ. ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


