ದೇಶ

ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಆರ್'ಎಸ್ಎಸ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯವು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬುಧವಾರ...

ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Published On :

ಮುಂಬೈ: ಆರ್'ಎಸ್ಎಸ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯವು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬುಧವಾರ ಜಾಮೀನು ಮಂಜೂರು ಮಾಡಿದೆ.

2014ರ ಲೋಕಸಭಾ ಚುನಾವಣಾ ಪ್ರಚಾರವೊಂದರಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಹಾತ್ಮ ಗಾಂಧಿಯವರನ್ನು ಕೊಂದಿದ್ದು ಆರ್'ಎಸ್ಎಸ್ ಎಂದು ಆರೋಪಿಸಿದ್ದರು. ಈ ಕುರಿತು ಆರ್'ಎಸ್ಎಸ್ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದಾಖಲು ಮಾಡಿದ್ದರು.

ಪ್ರಕರಣ ಸಂಬಂಧ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರು ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಈ ಬಗ್ಗೆ ಯಾವುದೇ ವಿಚಾರಣೆ ಎದುರಿಸಲು ನಾನು ಸಿದ್ಧನಿದ್ದೇನೆಂದು ಹೇಳಿದ್ದರು. ಇದರಂತೆ ಇಂದು ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯವು ವೈಯಕ್ತಿಕ ಬಾಂಡ್ ಆಧಾರದ ಮೇಲೆ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.