ದೇಶ

ವಿಜಯ್ ಮಲ್ಯ ಸಾಲ ಮನ್ನಾ ಮಾಡಿಲ್ಲ: ರಾಜ್ಯಸಭೆಯಲ್ಲಿ ಜೇಟ್ಲಿ ಸ್ಪಷ್ಟನೆ

ಮದ್ಯದ ದೊರೆ ವಿಜಯ್ ಮಲ್ಯ ಸೇರಿದಂತೆ 63ಕ್ಕೂ ಅಧಿಕ ಉದ್ದೇಶಪೂರ್ವಕ ಸುಸ್ತಿದಾರರ ಸಾಲವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ....

ವಿಜಯ್ ಮಲ್ಯ ಸಾಲ ಮನ್ನಾ ಮಾಡಿಲ್ಲ: ರಾಜ್ಯಸಭೆಯಲ್ಲಿ ಜೇಟ್ಲಿ ಸ್ಪಷ್ಟನೆ
ಅರುಣ್ ಜೇಟ್ಲಿ
Published On :
ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಸೇರಿದಂತೆ 63ಕ್ಕೂ ಅಧಿಕ ಉದ್ದೇಶಪೂರ್ವಕ ಸುಸ್ತಿದಾರರ ಸಾಲವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮನ್ನಾ ಮಾಡಿದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದ ವಿತ್ತ ಸಚಿವ ಸಚಿವ ಅರುಣ್ ಜೇಟ್ಲಿ ಅವರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಯಾವುದೇ ಸುಸ್ತಿದಾರರ ಸಾಲ ಮನ್ನಾ ಮಾಡಿಲ್ಲ ಎಂದು ಹೇಳಿದ್ದಾರೆ.
ಎಸ್ ಬಿಐ ಉದ್ದೇಶಪೂರ್ವಕ ಸುಸ್ತಿದಾರರ ಸಾಲವನ್ನು ಮನ್ನಾ ಮಾಡಿಲ್ಲ ಬದಲಾಗಿ, ಈ ಎಲ್ಲಾ ಖಾತೆಗಳನ್ನು ದುಡಿಯದ ಬಂಡವಾಳ ಎಂದು ಲೆಕ್ಕ ಪುಸ್ತಕದಲ್ಲಿ ಬರೆದಿಡಲಾಗಿದೆ. ಆದರೆ ಇದರಿಂದ ಸಾಲ ಮನ್ನಾ ಮಾಡಿದಂತೆ ಆಗುವುದಿಲ್ಲ ಸಾಲಗಾರರಿಂದ ಸಾಲ ವಸೂಲಿ ಮಾಡುವ ಹಕ್ಕು ಬ್ಯಾಂಕ್ ‍ಗಳಿಗೆ ಇದೆ. ಮಲ್ಯ ವಿರುದ್ಧದ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಜೇಟ್ಲಿ ರಾಜ್ಯಸಭೆಗೆ ತಿಳಿಸಿದರು.
ವಿಜಯ್ ಮಲ್ಯ ಅವರ ಕಿಂಗ್ ಫಿಷರ್ ಏರ್ ಲೈನ್ಸ್ ಸಂಸ್ಥೆಯ 1,201 ಕೋಟಿ ರು ಸೇರಿದಂತೆ ಬಾಕಿ ಉಳಿಸಿಕೊಂಡಿದ್ದ ಒಟ್ಟು 7 ಸಾವಿರ ಕೋಟಿ ರುಪಾಯಿ ಸಾಲವನ್ನು ಅಡ್ವಾನ್ಸ್ ಅಂಡರ್ ಕಲೆಕ್ಷನ್ ಅಕೌಂಟ್ಸ್(ಎಯುಸಿಎ) ವರ್ಗಕ್ಕೆ ವರ್ಗಾಯಿಸಲಾಗಿದೆ ಮತ್ತು ಆ ಮೂಲಕ ಈ ಸುಸ್ತಿ ಸಾಲವನ್ನು ಭವಿಷ್ಯದಲ್ಲಿ ವಸೂಲಿ ಮಾಡುವ ಅವಕಾಶವನ್ನು ಮುಕ್ತವಾಗಿರಿಸಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.
ರೈಟ್ ಆಫ್ ಕ್ರಮದಿಂದ ಬ್ಯಾಂಕಿನ ಲೆಕ್ಕ ಪತ್ರ ಪುಸ್ತಕಗಳಲ್ಲಿ ಆ ಸಾಲವನ್ನು ಅನುತ್ಪಾದಕ ಆಸ್ತಿ(ಎನ್ಪಿಎ) ಎಂದು ಪಟ್ಟಿ ಮಾಡಲಾಗಿದೆ. ಸುಸ್ತಿ ಸಾಲವನ್ನು ರೈಟ್ ಆಫ್ ಮಾಡುವುದೆಂದರೆ ಅದನ್ನು ಮನ್ನಾ ಮಾಡಿದಂತಾಗುವುದಿಲ್ಲ. ಈ ಸುಸ್ತಿ ಸಾಲವನ್ನು ವಸೂಲಾತಿಯನ್ನು ಇನ್ನೂ ಕೂಡ ವಸೂಲಿ ಮಾಡಲು ಅವಕಾಶವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.