ಹರಿಯಾಣದಲ್ಲಿ ಲಘು ಭೂಕಂಪ: 4.4ರಷ್ಟು ತೀವ್ರತೆ ದಾಖಲು
ಹರಿಯಾಣದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ರಷ್ಟು ತೀವ್ರತೆ ದಾಖಲಾಗಿದೆ...

ನವದೆಹಲಿ: ಹರಿಯಾಣದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ರಷ್ಟು ತೀವ್ರತೆ ದಾಖಲಾಗಿದೆ.
ರಾಜಧಾನಿ ನವದೆಹಲಿ ಹಾಗೂ ಗುರಗಾಂವ್ ನಲ್ಲೂ ಭೂಕಂಪನದ ಅನುಭವವಾಗಿದ್ದು, ದೆಹಲಿಯ ಎನ್.ಸಿ.ಆರ್ ನಲ್ಲಿ ಕೆಲವು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದಿಂದಾಗಿ ಭಯಭೀತರಾಗಿರುವ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಹರಿಯಾಣ-ರಾಜಸ್ಥಾನ ರಾಜ್ಯದ ಗಡಿಭಾಗದ ಬಾವಲ್ ನಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡುಬಂದಿದೆ. ದೆಹಲಿ, ಘಾಜಿಯಾಬಾದ್, ಗುರಗಾಂವ್ ಸೇರಿದಂದೆ ಇನ್ನಿತರೆ ಪ್ರದೇಶಗಳಲ್ಲಿ ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಭೂಮಿಕಂಪಿಸಿದ ಅನುಭವವಾಗಿದೆ ಎಂದು ವರದಿಗಳು ತಿಳಿಸಿವೆ.
ಭೂಕಂಪನದಿಂದಾಗಿ ನಷ್ಟ, ಸಾವು-ನೋವುಗಳು ಸಂಭವಿಸಿರುವುದಾಗಿ ಈ ವರೆಯೂ ಯಾವುದೇ ವರದಿಗಳಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


