ಭಾರತ ಆರ್ಥಿಕವಾಗಿ ಸೂಪರ್ ಪವರ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ರಾಜನಾಥ್ ಸಿಂಗ್
ಮುಂದಿನ 15 ವರ್ಷಗಳಲ್ಲಿ ಭಾರತ ಆರ್ಥಿಕವಾಗಿ ಸೂಪರ್ ಪವರ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ...

ರೇವಾರಿ: ಮುಂದಿನ 15 ವರ್ಷಗಳಲ್ಲಿ ಭಾರತ ಆರ್ಥಿಕವಾಗಿ ಸೂಪರ್ ಪವರ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಹರ್ಯಾಣದ ರೇವಾರಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಸರ್ಕಾರ ಜಾರಿಗೆ ತಂದಿರುವ ನೀತಿಯಿಂದ ಕೆಲ ಸಮಯ ತೊಂದರೆ ಉಂಟಾಗುತ್ತದೆ. ಆದರೆ ಮುಂದಿನ 15 ವರ್ಷಗಳಲ್ಲಿ ಭಾರತ ಆರ್ಥಿಕವಾಗಿ ಸೂಪರ್ ಪವರ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಾನು ಭರವಸೆ ನೀಡುತ್ತೇನೆ ಎಂದು ಹೇಳಿದರು.
ಈ ಐತಿಹಾಸಿಕ ನಿರ್ಧಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ. ನೀವು ಮತ ಚಲಾಯಿಸಿರುವುದು ಕೇವಲ ಸರ್ಕಾರ ಬದಲಾಯಿಸಿಕೊಳ್ಳುವುದಕ್ಕಲ್ಲ, ವ್ಯವಸ್ಥೆ ಬದಲಾಯಿಸಿಕೊಳ್ಳಲು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


