ದೇಶವನ್ನು ವಿನಾಶದ ಅಂಚಿಗೆ ತಳ್ಳಿದ ಬಿಜೆಪಿ ಕ್ಷಮೆ ಕೇಳಲೇಬೇಕು: ಗುಲಾಂ ನಬಿ ಆಜಾದ್
ನೋಟು ನಿಷೇಧವನ್ನು ಭಯೋತ್ಪಾದಕರ ದಾಳಿಗೆ ಹೋಲಿಸಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ತಮ್ಮ ಹೇಳಿಕೆಗೆ ತಾವು ಈಗಲೂ ..

ನವದೆಹಲಿ: ನೋಟು ನಿಷೇಧವನ್ನು ಭಯೋತ್ಪಾದಕರ ದಾಳಿಗೆ ಹೋಲಿಸಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ತಮ್ಮ ಹೇಳಿಕೆಗೆ ತಾವು ಈಗಲೂ ಬದ್ಧರಾಗಿದ್ದೂ ಯಾವುದೇ ಕಾರಣಕ್ಕೂ ಕ್ಷಮೆ ಕೋರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಗುಲಾಂ ನಬಿ ಆಜಾದ್, ದೇಶವನ್ನು ವಿನಾಶದ ಅಂಚಿಗೆ ತಳ್ಳಿರುವ ಬಿಜೆಪಿ ದೇಶದ ಕ್ಷಮೆ ಯಾಚಿಸಬೇಕು ಕಾಂಗ್ರೆಸ್ ಅಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದ ಇವತ್ತಿನ ಪರಿಸ್ಥಿತಿಗೆ ಬಿಜೆಪಿಯೇ ನೇರ ಹೊಣೆ ಎಂದು ಅವರು ಆರೋಪಿಸಿದ್ದಾರೆ.
ನೋಟು ನಿಷೇಧವನ್ನು ಭಯೋತ್ಪಾದಕ ದಾಳಿಗೆ ಹೋಲಿಸಿರುವ ಸಂಸದ ಗುಲಾಂ ನಬಿ ಆಜಾದ್ ಕ್ಷಮೆ ಕೋರಬೇಕು ಎಂದು ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಆಗ್ರಹಿಸಿದ್ದರು. ಭ್ರಷ್ಟಾಚಾರ ವಿರುದ್ಧ ಹೋರಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕರುಗಳು ದೇಶದ ಹಾಗೂ ಮೋದಿ ಅವರ ಕ್ಷಮೆ ಕೋರಬೇಕು ಎಂದು ಬಿಜೆಪಿ ಸಂಸದರು ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


