ದೇಶ

ತಾಯಿ, ಮಗಳ ಮೇಲೆ ಆ್ಯಸಿಡ್ ದಾಳಿ: ದಂಪತಿಗಳ ಬಂಧನ

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ತಾಯಿ, ಮಗಳ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ ದಂಪತಿಗಳಿಬ್ಬರನ್ನು ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ತಾಯಿ, ಮಗಳ ಮೇಲೆ ಆ್ಯಸಿಡ್ ದಾಳಿ: ದಂಪತಿಗಳ ಬಂಧನ
ಸಾಂದರ್ಭಿಕ ಚಿತ್ರ
Published On :

ಹೌರಾ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ತಾಯಿ, ಮಗಳ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ ದಂಪತಿಗಳಿಬ್ಬರನ್ನು ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಸುನಿಲ್ ಸಿಂಗ್ ಮತ್ತು ಪತ್ನಿ ಗೀತಾ ಸಿಂಗ್ ಬಂಧಿತ ದಂಪತಿಗಳು. ವೈಯಕ್ತಿಯ ದ್ವೇಷ ಹಿನ್ನೆಲೆಯಲ್ಲಿ ದಂಪತಿಗಳಿಬ್ಬರು ನಿರ್ಮಲ ಸಿಂಗ್ ಹಾಗೂ ಆಕೆಯ ಮಗಳಾದ ಪಲ್ಲವಿ ಎಂಬುವವರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದರು. ಈ ಕುರಿತಂತೆ ಪ್ರಕರಣವೊಂದು ದಾಖಲಾಗಿತ್ತು.

ಬಂಧಿತರಾಗಿರುವ ದಂಪತಿಗಳು ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಪಡೆದುಕೊಂಡಿದ್ದರು. ಕೆಲ ತಿಂಗಳ ಹಿಂದಷ್ಟೇ ಈ ಬಗ್ಗೆ ಮಾಹಿತಿ ತಿಳಿದಿದ್ದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡಿದ್ದರು. ಆ್ಯಸಿಡ್ ದಾಳಿಗೆ ಒಳಗಾದ ನಿರ್ಮಲ ಸಿಂಗ್ ಅವರ ಪತಿಯೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆಂದು ಶಂಕಿಸಿದ್ದ ಆರೋಪಿಗಳು ಕುಪಿತರಾಗಿ ನಿರ್ಮಲ ಸಿಂಗ್ ಹಾಗೂ ಆಕೆಯ ಮಗಳ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೀಗ ನಿರ್ಮಲ ಸಿಂಗ್ ಹಾಗೂ ಅವರ ಮಗಳು ಪಲ್ಲವಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬಂಧಿತ ದಂಪತಿಗಳನ್ನು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿರುವ ನ್ಯಾಯಾಲಯದ ದಂಪತಿಗಳಿಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.