ದೇಶ

ದೆಹಲಿ: ಪ್ಲಾಸ್ಟಿಕ್ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ

ಪಶ್ಚಿಮ ದೆಹಲಿಯ ಮುಂಡ್ಕ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಮಾರುಕಟ್ಟೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಶುಕ್ರವಾರ...

ದೆಹಲಿ: ಪ್ಲಾಸ್ಟಿಕ್ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ
ದೆಹಲಿ: ಪ್ಲಾಸ್ಟಿಕ್ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ
Published On :

ನವದೆಹಲಿ: ಪಶ್ಚಿಮ ದೆಹಲಿಯ ಮುಂಡ್ಕ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಮಾರುಕಟ್ಟೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, ಮಾರುಕಟ್ಟೆಯ ಸುತ್ತಲೂ ದಟ್ಟ ಹೊಗೆ ಆವರಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ 33 ಅಗ್ನಿ ಶಾಮಕದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಘಟನೆಗೆ ಈ ವರೆಗೂ ಕಾರಣಗಳು ತಿಳಿದುಬಂದಿಲ್ಲ. ಯಾವುದೇ ರೀತಿಯ ಸಾವು, ನೋವುಗಳ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಮೂಲಗಳ ಪ್ರಕಾರ ಈಗಾಗಲೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.