ನೋಟ್ ನಿಷೇಧ ವಿರೋಧಿಸಿ ಕೇರಳ ಸಿಎಂ, ಯೆಚೂರಿಯಿಂದ ಆರ್ ಬಿಐ ಮುಂದೆ ಧರಣಿ
ಕೇಂದ್ರ ಸರ್ಕಾರದ ನೋಟ್ ನಿಷೇಧ ನಿರ್ಧಾರ ವಿರೋಧಿಸಿ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು ತಮ್ಮ ಸಂಪುಟ....

Published On :
ತಿರುವನಂತಪುರಂ: ಕೇಂದ್ರ ಸರ್ಕಾರದ ನೋಟ್ ನಿಷೇಧ ನಿರ್ಧಾರ ವಿರೋಧಿಸಿ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ತಿರುವನಂತಪುರಂನಲ್ಲಿರುವ ಆರ್ ಬಿಐ ಕಚೇರಿ ಮುಂದೆ ಒಂದು ದಿನ ಧರಣಿ ನಡೆಸುತ್ತಿದ್ದಾರೆ.
ಈ ವೇಳೆ ಮಾತನಾಡಿದ ಕೇರಳ ಮುಖ್ಯಮಂತ್ರಿ ವಿಜಯನ್ ಅವರು, ನರೇಂದ್ರ ಮೋದಿ ಸರ್ಕಾರ ಕೇರಳದ ಸಹಕಾರಿ ವಲಯವನ್ನು ನಾಷ ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ನೋಟ್ ನಿಷೇಧ ಕ್ರಮದಿಂದಾಗಿ ಕೇರಳ ಆರ್ಥಿಕತೆ ಹಾಳಾಗಿದೆ ಎಂದ ಕೇರಳ ಸಿಎಂ, ಸಹಾಕರಿ ಬ್ಯಾಂಕ್ ಗಳಲ್ಲಿ ಕೇವಲ ಡೆಪೊಸಿಟ್ ಅವಕಾಶ ನೀಡಿ, ನೋಟ್ ಬದಲಾವಣೆಗೆ ಅವಕಾಶ ನೀಡದ ಆರ್ ಬಿಐ ಕ್ರಮವನ್ನು ಖಂಡಿಸಿದರು.
ಇನ್ನು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು, ನೋಟ್ ನಿಷೇಧ ನಿರ್ಧಾರ ಸಂಪೂರ್ಣ ಅಸಂಬದ್ಧ ಎಂದರು. ಅಲ್ಲದೆ ಕಪ್ಪು ಹಣ ಹಾಗೂ ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಇದು ಸಂಪೂರ್ಣ ವಿಫಲವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


