ನೋಟುಗಳ ನಿಷೇಧ ಕ್ರಮ ಜಿಡಿಪಿಯನ್ನು ಹೆಚ್ಚಿಸುತ್ತದೆ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್
500, 1000 ರೂ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದಿಂದ ಜಿಡಿಪಿ ಕುಸಿಯುತ್ತದೆ ಎಂಬ ಆರ್ಥಿಕ ತಜ್ಞರ ಅಭಿಪ್ರಾಯವನ್ನು ತಳ್ಳಿಹಾಕಿರುವ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ನೋಟು ನಿಷೇಧ ಕ್ರಮದಿಂದ ಜಿಡಿಪಿ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published On :
ನವದೆಹಲಿ: 500, 1000 ರೂ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದಿಂದ ಜಿಡಿಪಿ ಕುಸಿಯುತ್ತದೆ ಎಂಬ ಆರ್ಥಿಕ ತಜ್ಞರ ಅಭಿಪ್ರಾಯವನ್ನು ತಳ್ಳಿಹಾಕಿರುವ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ನೋಟು ನಿಷೇಧ ಕ್ರಮದಿಂದ ಜಿಡಿಪಿ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಎಸ್ ಟಿ ಹಾಗೂ ನೋಟು ನಿಷೇಧ ಕ್ರಮದಿಂದ 2017-18ರ ವೇಳೆಗೆ ಭಾರತದ ಜಿಡಿಪಿ ಬೆಳಾವಣಿಗೆ ಎರಡು ಅಂಕಿಗಳಷ್ಟಾಗಲಿದ್ದು ಪರಿಣಾಮ ತಿಳಿಯಲಿದೆ ಎಂದು ಮೇಘವಾಲ್ ತಿಳಿಸಿದ್ದಾರೆ. 2017-18 ರ ವೇಳೆಗೆ ಭಾರತದ ಜಿಡಿಪಿ ಶೇ.7.6ರಷ್ಟಾಗಲಿದೆ ಎಂದು ಐಎಂಎಫ್ ಹೇಳಿದ್ದರೆ ಶೇ.7.9ರಷ್ಟಾಗಲಿದೆ ಎಂದು ರೇಟಿಂಗ್ ಏಜೆನ್ಸಿ ಫಿಚ್ ಅಂದಾಜು ನೀಡಿದೆ. ಆದರೆ ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮದಿಂದ ಜಿಡಿಪಿ ಬೆಳವಣಿಗೆ ಶೇ.೦.7-1 ರಷ್ಟು ಕುಸಿಯಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.
ಆರ್ಥಿಕ ತಜ್ಞರ ಅಭಿಪ್ರಾಯಕ್ಕಿಂತ ಭಿನ್ನವಾದ ಅಭಿಪ್ರಾಯ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಜಿಡಿಪಿ ಬೆಳವಣಿಗೆ ದರ ಎರಡು ಅಂಕಿಗಳನ್ನು ದಾಟಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Central Governmentಕೇಂದ್ರ ಸರ್ಕಾರಜಿಡಿಪಿ ಬೆಳವಣಿಗೆGDP growthdemonetizationನೋಟು ನಿಷೇಧminister Arjun Ram Meghwalಸಚಿವ ಅರ್ಜುನ್ ರಾಮ್ ಮೇಘವಾಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


