ಉ.ಪ್ರ ಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿ ಪ್ರಮುಖ ಪಾತ್ರ: ಕಾಂಗ್ರೆಸ್
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲಿರುವ ಪ್ರಿಯಾಂಕ ಗಾಂಧಿ ಪ್ರಮುಖ ಪಾತ್ರ ವಹಿಸಲಿದ್ದಾರೆ

Published On :
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲಿರುವ ಪ್ರಿಯಾಂಕ ಗಾಂಧಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸಂಜಯ್ ಸಿಂಗ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೆ ಪ್ರಿಯಾಂಕ ಗಾಂಧಿ ಕಾಂಗ್ರೆಸ್ ಪರ ಪ್ರಚಾರ ಮಾಡುವುದು ನಿಗದಿಯಾಗಿದೆ. ಪಕ್ಷದ ಪರ ಪ್ರಚಾರ ಮಾಡುವ ನಮ್ಮ ಆಹ್ವಾನಕ್ಕೆ ಪ್ರಿಯಾಂಕ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ. ಅವರ ಬಿಡುವಿನ ಸಮಯವನ್ನು ಪ್ರಚಾರ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳಲಿದ್ದೇವೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷ ರಾಜ್ ಬಬ್ಬರ್ ತಿಳಿಸಿದ್ದಾರೆ.
ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ ಪ್ರಿಯಾಂಕ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಬಗ್ಗೆ ಮತ್ತಷ್ಟು ಸ್ಪಷ್ಟನೆ ನೀಡುವುದಾಗಿ ರಾಜ್ ಬಬ್ಬರ್ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವಿಕೆ ಪಕ್ಷ ಹಾಗೂ ರಾಜ್ಯದ ಜನತೆಯಲ್ಲಿ ವಿಶ್ವಾಸ ಮೂಡಿಸುತ್ತದೆ ಅವರಿಗೆ ಹೆಚ್ಚಿನ ಸಮಯ ಸಿಕ್ಕಲ್ಲಿ ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತಾರೆ ಎಂದು ರಾಜ್ ಬಬ್ಬರ್ ಈ ಹಿಂದೆ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Assembly electionsವಿಧಾನಸಭಾ ಚುನಾವಣೆUttar pradeshಉತ್ತರ ಪ್ರದೇಶPriyanka Gandhiಪ್ರಿಯಾಂಕ ಗಾಂಧಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


