ಉಲ್ಫಾ ಉಗ್ರರ ದಾಳಿ: ಅಸ್ಸಾಂ ಸಿಎಂ ಜೊತೆ ಗೃಹ ಸಚಿವ ರಾಜನಾಥ್ ಸಿಂಗ್ ಮಾತು
ಅಸ್ಸಾಂನ ತಿನ್ಸುಕಿಯಾ ನಲ್ಲಿ ಶಂಕಿತ ಉಲ್ಫಾ ಉಗ್ರರು ಭಾರತೀಯ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಸ್ಸಾಂ ಸಿಎಂ ಸರ್ಬಾನಂದ್ ಸೋನೊವಾಲ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.

Published On :
ನವದೆಹಲಿ: ಅಸ್ಸಾಂನ ತಿನ್ಸುಕಿಯಾ ನಲ್ಲಿ ಶಂಕಿತ ಉಲ್ಫಾ ಉಗ್ರರು ಭಾರತೀಯ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಸ್ಸಾಂ ಸಿಎಂ ಸರ್ಬಾನಂದ್ ಸೋನೊವಾಲ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.
ಸರ್ಬಾನಂದ ಸೋನೋವಾಲ್ ಅವರೊಂದಿಗೆ ಮಾಹಿತಿ ಪಡೆದ ಬಳಿಕ ಉಗ್ರರ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರಾಜನಾಥ್ ಸಿಂಗ್, ಗೃಹ ಇಲಾಖೆ (ಎಂಹೆಚ್ಎ) ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಅಸ್ಸಾಂನ ತಿನ್ಸುಕಿಯಾ ನಲ್ಲಿ ಸಂಭವಿಸಿದ ಬಾಂಬ್ ದಾಳಿಯಲ್ಲಿ ಯೋಧರು ಮೃತಪಟ್ಟಿರುವುದು ನೋವುಂಟು ಮಾಡಿದೆ. ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಯೋಧರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಉಗ್ರರ ಹಾಗೂ ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಬಾಂಬ್ ದಾಳಿಯಲ್ಲಿ ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್Indian ArmyAssamಅಸ್ಸಾಂRajnath Singhಭಾರತೀಯ ಸೇನೆTinsukiaತಿನ್ಸುಕಿಯಾulfa ambush attackಉಲ್ಫಾ ಉಗ್ರರರ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


