ಉತ್ತರಪ್ರದೇಶದ ಪುಖರಾಯಾ ಬಳಿ ಭೀಕರ ರೈಲು ದುರಂತ: 96ಕ್ಕೇರಿದ ಸಾವಿನ ಸಂಖ್ಯೆ
ಉತ್ತರಪ್ರದೇಶದ ಪುಖರಾಯಾ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ 45ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ....

Published On :
ಕಾನ್ಪುರ: ಉತ್ತರಪ್ರದೇಶದ ಪುಖರಾಯಾ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ 96ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಝಾನ್ಸಿ-ಕಾನ್ಪುರ ರೈಲ್ವೆ ಮಾರ್ಗದಲ್ಲಿ 14 ಬೋಗಿಗಳಿದ್ದ ಇಂದೋರ್ ಪಾಟ್ನಾ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 3.15ರ ಸುಮಾರಿಗೆ ಹಳಿತಪ್ಪಿದರಿಂದ ದುರಂತ ಸಂಭವಿಸಿದೆ.
ಪುಖರಾಯಾ ರೈಲ್ವೆ ಸ್ಟೇಷನ್ ಬಳಿ ದುರ್ಘಟನೆ ಸಂಭವಿಸಿದ್ದು ಸ್ಥಳದಲ್ಲೇ 96ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಬಿಡುತ್ತಿರುವ ಪೊಲೀಸರು ಸ್ಥಳೀಯ ನೆರವಿನೊಂದಿಗೆ ಹಲವರನ್ನು ರಕ್ಷಿಸಿದ್ದಾರೆ. ಸದ್ಯ 30 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಭೀಕರ ರೈಲು ದುರಂತವಾಗಿರುವುದರಿಂದ ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ,
ಝಾನ್ಸಿ-ಕಾನ್ಪುರ ರೈಲ್ವೆ ಮಾರ್ಗದಲ್ಲಿ ದುರಂತ ಸಂಭವಿಸಿದರಿಂದ ಹಲವು ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ.
ರೈಲು ದುರಂತದ ಸಂಬಂಧ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಸೂಚನೆ ಮೇರೆಗೆ ಎನ್ಡಿಆರ್ಎಫ್ ತಂಡ ಘಟನಾ ಸ್ಥಳಕ್ಕೆ ತೆರಳಲಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಲಿದ್ದಾರೆ.
ರೇಲ್ವೆ ಸಹಾಯಕ ಸಂಖ್ಯೆ
ಝಾನ್ಸಿ-05101072, ಕಾನ್ಪುರ್-05151072, ಒರೈ-051621072, ಪುಖರಾಯಾ-05113-270239
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


