ನೋಟು ನಿಷೇಧಕ್ಕಿರುವ ಜನತೆ ಬೆಂಬಲ ದೇಶದ ಮೇಲಿನ ಗೌರವವನ್ನು ಸೂಚಿಸುತ್ತದೆ-ರಾಜನಾಥ ಸಿಂಗ್
ನೋಟು ನಿಷೇಧ ಕುರಿತಂತೆ ದೇಶದ ಜನತೆ ತೋರಿಸುತ್ತಿರುವ ಬೆಂಬಲಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸಂತಸ ವ್ಯಕ್ತಪಡಿಸಿದ್ದು, ನೋಟು ನಿಷೇಧಕ್ಕಿರುವ ಜನತೆ ಬೆಂಬಲ ದೇಶದ ಮೇಲಿನ ಗೌರವವನ್ನು ಸೂಚಿಸುತ್ತದೆ ಎಂದು...

ನವದೆಹಲಿ: ನೋಟು ನಿಷೇಧ ಕುರಿತಂತೆ ದೇಶದ ಜನತೆ ತೋರಿಸುತ್ತಿರುವ ಬೆಂಬಲಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸಂತಸ ವ್ಯಕ್ತಪಡಿಸಿದ್ದು, ನೋಟು ನಿಷೇಧಕ್ಕಿರುವ ಜನತೆ ಬೆಂಬಲ ದೇಶದ ಮೇಲಿನ ಗೌರವವನ್ನು ಸೂಚಿಸುತ್ತದೆ ಎಂದು ಭಾನುವಾರ ಹೇಳಿದ್ದಾರೆ.
ನೋಟು ನಿಷೇಧ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದುಬಾರಿ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದ್ದು, ಸರ್ಕಾರ ರಚನೆ ಮಾಡುವುದಕ್ಕಾಗಿ ಅಲ್ಲದೆ, ದೇಶದ ಹಿತಾಸಕ್ತಿಗಾಗಿ ರಾಜಕೀಯ ಮಾಡುವವರಿಗೆ ಮಾತ್ರ ಈ ರೀತಿಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ. ಅಂತಹ ನಿರ್ಧಾರವನ್ನು ನಮ್ಮ ಪ್ರಧಾನಿಗಳು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಈ ನಿರ್ಧಾರ ದೇಶದ ರಾಜಕೀಯ ಸ್ವರೂಪ, ಕಾನೂನು ಮತ್ತು ಆಡಳಿತವನ್ನು ಅಭಿವೃದ್ಧಿಗೊಳ್ಳುವಂತೆ ಮಾಡುತ್ತದೆ. ಅಲ್ಲದೆ, ಭಯೋತ್ಪಾದನೆ, ಬಂಡಾಯಕೋರರಿಗೆ ಅಂತ್ಯವನ್ನು ಹಾಡುತ್ತದೆ. ಬಡವರು ಹಾಗೂ ಶ್ರೀಮಂತರು ಎಂಬ ಅಂತರವನ್ನು ಅಳಿಸಿ ಹಾಕುತ್ತದೆ.
ಈ ನಿರ್ಧಾರ ಬಹಳ ದೊಡ್ಡದಾಗಿದೆ. ಆರಂಭಿಕದಲ್ಲಿ ಜನತೆ ಮೇಲೆ ಪರಿಣಾಮ ಬೀರಲಿದೆ. ಆದರೆ, ಮುಂದಿನ ಭವಿಷ್ಯದಲ್ಲಿ ದೊಡ್ಡ ಬೆಳವಣಿಗೆಯನ್ನೇ ಕಾಣಲಿದ್ದೇವೆ. ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದರೂ ಜನತೆ ಸರ್ಕಾರ ನಿರ್ಧಾರಕ್ಕೆ ಬೆಂಬಲವನ್ನು ವ್ಯಕ್ತಪಡಿಸುತ್ತಿದೆ. ಜನತೆಯ ಬೆಂಬಲ ದೇಶದ ಮೇಲಿರುವ ಹೆಮ್ಮೆ ಹಾಗೂ ಗೌರವವನ್ನು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


