ಮಣಿಪುರದಲ್ಲಿ ಐಇಡಿ ಸ್ಫೋಟ: ಓರ್ವ ಸಾವು
ಇಂಫಾಲ ಸಿಂಗ್ಜಾಮೈ ಪ್ರದೇಶದಲ್ಲಿ ಐಇಡಿ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವುದಾಗಿ ಭಾನುವಾರ ತಿಳಿದುಬಂದಿದೆ...

ಇಂಫಾಲ: ಇಂಫಾಲ ಸಿಂಗ್ಜಾಮೈ ಪ್ರದೇಶದಲ್ಲಿ ಐಇಡಿ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವುದಾಗಿ ಭಾನುವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ 8.40ರ ಸುಮಾರಿಗೆ ಘಟನೆ ನಡೆದಿದೆ. ಸ್ಫೋಟ ಸಂಭವಿಸುವುದಕ್ಕೂ ಕೆಲ ನಿಮಿಷಗಳ ಹಿಂದಷ್ಟೇ ಅಸ್ಸಾಂ ರೈಫಲ್ಸ್ ಸೈನಿಕರು ವಾಹನದಲ್ಲಿ ಸಾಗಿದ್ದರು. ಯೋಧರ ವಾಹನಗಳು ಮುಂದೆ ಹೋದ ಕೆಲ ನಿಮಿಷಗಳಲ್ಲೇ ಐಇಡಿ ಸ್ಪೋಟಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿ 102ರಲ್ಲಿ ಈ ಮೊದಲೇ ಐಐಡಿಯನ್ನು ಇಡಲಾಗಿದೆ. ಸ್ಫೋಟ ಸಂಭವಿಸುವ ವೇಳೆ ವ್ಯಕ್ತಿಯೋರ್ವ ಕಾಲುದಾರಿ ಪ್ರದೇಶದ ಬಳಿ ಕುಳಿತುಕೊಂಡಿದ್ದ. ಸ್ಥಳದಲ್ಲಿ ದ್ವಿಚಕ್ರ ವಾಹನವೊಂದನ್ನು ನಿಲ್ಲಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು, ಅಸ್ಸಾಂ ರೈಫಲ್ಸ್ ನ 6 ಬೆಟಾಲಿಯನ್ ಗಳು ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಘಟನೆಯ ಜವಾಬ್ದಾರಿಯನ್ನು ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


