ರೈಲು ದುರಂತ: ಸಂತ್ರಸ್ತರಿಗೆ ಕೇಂದ್ರದಿಂದ ರು 3.5, ರಾಜ್ಯದಿಂದ ರು.5 ಲಕ್ಷ ಪರಿಹಾರ
ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು...

ನವದೆಹಲಿ: ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು ಭಾನುವಾರ ಘೋಷಣೆ ಮಾಡಲಾಗಿದೆ.
ಘಟನೆ ಕುರಿತಂತೆ ತೀವ್ರ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಮೃತರ ಕುಟುಂಬಗಳಿಗೆ ಪರಿಹಾರ ಹಣವನ್ನು ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ರು.5 ಲಕ್ಷ, ಗಂಭೀರವಾಗಿ ಗಾಯಗೊಂಡಿರುವವರಿಗೆ ರು. 50,000 ಹಣ ಹಾಗೂ ಸಣ್ಣಪುಟ್ಟ ಗಾಯವಾಗಿರುವವರಿಗೆ ರು.25,000 ಧನವನ್ನು ನೀಡುವುದಾಗಿ ಹೇಳಿದ್ದಾರೆ.
ಕೇಂದ್ರ ರೈಲ್ವೆ ಸಚಿವರು ಕೂಡ ಪರಿಹಾರ ಧನವನ್ನು ಘೋಷಣೆ ಮಾಡಿದ್ದು, ಮೃತರ ಕುಟುಂಬಗಳಿಗೆ ರು..3.5 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ರು. 50,000 ಹಾಗೂ ಸಣ್ಣ ಪುಟ್ಟ ಗಾಯವಾದವರಿಗೆ ರು.25,000 ಹಣವನ್ನು ಘೋಷಣೆ ಮಾಡಿದ್ದಾರೆ.
ಅಲ್ಲದೆ, ಘಟನಾ ಸ್ಥಳಕ್ಕೆ ರೈಲ್ವೆ ರಕ್ಷಣಾ ಪಡೆ ಹಾಗೂ ರೈಲ್ವೆ ಆರೋಗ್ಯ ಸೇವಾ ಸಿಬ್ಬಂದಿಗಳನ್ನು ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗುವಂತೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


