ದೇಶ

ನ.1 ರಿಂದ ಡಿ.31 ವರೆಗಿನ ಸಾಲ ಪಾವತಿಗೆ 60 ದಿನಗಳ ಹೆಚ್ಚುವರಿ ಕಾಲಾವಕಾಶ

500, 1000 ರೂ ನೋಟುಗಳ ರದ್ದತಿ ಪರಿಣಾಮ, ನೋಟುಗಳ ಅಭಾವ ಎದುರಾಗಿದ್ದು ಬ್ಯಾಂಕ್ ಗಳಲ್ಲಿ ಸಾಲ ಪಡೆದಿರುವ ಗ್ರಾಹಕರಿಗೆ ಸಾಲದ ಕಂತು ಪಾವತಿ ಮಾಡಲು ಬ್ಯಾಂಕ್ 60 ದಿನಗಳ ಹೆಚ್ಚುವರಿ ಕಾಲಾವಕಾಶ

ನ.1 ರಿಂದ ಡಿ.31  ವರೆಗಿನ ಸಾಲ ಪಾವತಿಗೆ 60 ದಿನಗಳ ಹೆಚ್ಚುವರಿ ಕಾಲಾವಕಾಶ
ನ.1 ರಿಂದ ಡಿ.31 ವರೆಗಿನ ಸಾಲ ಪಾವತಿಗೆ 60 ದಿನಗಳ ಹೆಚ್ಚುವರಿ ಕಾಲಾವಕಾಶ
Published On :
ಮುಂಬೈ: 500, 1000 ರೂ ನೋಟುಗಳ ರದ್ದತಿ ಪರಿಣಾಮ, ನೋಟುಗಳ ಅಭಾವ ಎದುರಾಗಿದ್ದು ಬ್ಯಾಂಕ್ ಗಳಲ್ಲಿ ಸಾಲ ಪಡೆದಿರುವ ಗ್ರಾಹಕರಿಗೆ ಸಾಲ ಮರುಪಾವತಿ ಮಾಡಲು ಬ್ಯಾಂಕ್ 60 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ. ಈ ಅವಕಾಶ ನ.1 ರಿಂದ ಡಿ.31 ರವರೆಗೆ ಪಾವತಿ ಮಾಡಬೇಕಿರುವವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಆರ್ ಬಿಐ ಹೇಳಿದೆ.  
ಒಂದು ಕೋಟಿಗಿಂತ ಕಡಿಮೆ ಸಾಲ ಪಡೆದ ಗ್ರಾಹಕರಿಗೆ ಈ ನಿಯಮ ಅನ್ವಯವಾಗಲಿದ್ದು, ನ.1ರಿಂದ ಡಿ.31 ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ 60 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. ಒಂದು ಕೋಟಿ ರೂ ಗಿಂತ ಕಡಿಮೆ ಇರುವ ವ್ಯಾಪಾರ ಅಥವಾ ವೈಯಕ್ತಿಕ ವಿಭಾಗದ ದೀರ್ಘಾವಧಿಯ ಸಾಲ, ಬ್ಯಾಂಕೇತರ ಹಣಕಾಸು ಕಂಪನಿ (ಮೈಕ್ರೋ ಫೈನಾನ್ಸ್ ಸಂಸ್ಥೆ)ಗಳ ಸಾಲದ ಕಂತುಗಳಿಗೂ ಇದೇ ನಿಯಮ ಅನ್ವಯವಾಗಲಿದೆ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. 
ಆರ್ ಬಿಐ ನೀಡಿರುವ ಹೆಚ್ಚುವರಿ ಕಾಲಾವಕಾಶ ಗೃಹ ಸಾಲ, ಕೃಷಿ ಸಾಲಗಳಿಗೂ ಅನ್ವಯಿಸಲಿದ್ದು ಎಲ್ಲಾ ನಿಯಂತ್ರಿತ ಹಣಕಾಸು ಸಂಸ್ಥೆಗಳು ಆರ್ ಬಿಐ ನ ನಿಯಮಗಳನ್ನು ಪಾಲಿಸಬೇಕು ಎಂದು ಆರ್ ಬಿಐ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.