ದೇಶ

ನೋಟು ನಿಷೇಧ ಕುರಿತು ಕೇಂದ್ರ ಸರ್ಕಾರ ಮರು ಚಿಂತನೆ ನಡೆಸುವ ಅಗತ್ಯವಿದೆ: ಶಿವಸೇನೆ

ರು.500 ಹಾಗೂ 1,000 ದುಬಾರಿ ನೋಟಿನ ಮೇಲೆ ನಿಷೇಧ ಹೇರಿರುವ ಕೇಂದ್ರ ಸರ್ಕಾರ, ತನ್ನ ನಿರ್ಧಾರದ ಕುರಿತು ಮರು ಚಿಂತನೆ ನಡೆಸುವ ಅಗತ್ಯವಿದೆ ಎಂದು ಬಿಜೆಪಿ ಅಂಗಪಕ್ಷ ಶಿವಸೇನೆ...

ನೋಟು ನಿಷೇಧ ಕುರಿತು ಕೇಂದ್ರ ಸರ್ಕಾರ ಮರು ಚಿಂತನೆ ನಡೆಸುವ ಅಗತ್ಯವಿದೆ: ಶಿವಸೇನೆ
ಶಿವಸೇನೆ ನಾಯಕಿ ಮನಿಷಾ ಕಯಾಂಡೆ
Published On :

ಮುಂಬೈ: ರು.500 ಹಾಗೂ 1,000 ದುಬಾರಿ ನೋಟಿನ ಮೇಲೆ ನಿಷೇಧ ಹೇರಿರುವ ಕೇಂದ್ರ ಸರ್ಕಾರ, ತನ್ನ ನಿರ್ಧಾರದ ಕುರಿತು ಮರು ಚಿಂತನೆ ನಡೆಸುವ ಅಗತ್ಯವಿದೆ ಎಂದು ಬಿಜೆಪಿ ಅಂಗಪಕ್ಷ ಶಿವಸೇನೆ ಸೋಮವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕಿ ಮನಿಷಾ ಕಯಾಂಡೆ ಅವರು, ಕಪ್ಪುಹಣದ ವಿರುದ್ಧದ ಸರ್ಕಾರದ ಹೋರಾಟದ ಪರವಾಗಿ ಶಿವಸೇನೆ ಯಾವಾಗಲೂ ಇರುತ್ತದೆ. ಆದರೆ, ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವ ಕಠಿಣ ನಿರ್ಧಾರದಿಂದಾಗಿ ಇಂದು ಜನ ಸಾಮಾನ್ಯರಿಗೆ ಸಾಕಷ್ಟು ಸಮಸ್ಯೆಗಳು ಎದುರಾಗಿದೆ ಇದನ್ನು ಶಿವಸೇನೆ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಕಪ್ಪುಹಣದ ವಿರುದ್ಧದ ಹೋರಾಟವನ್ನು ಭಾರತದಲ್ಲಿರುವ ಪ್ರತೀಯೊಬ್ಬ ಭಾರತೀಯನ್ನು ಸ್ವಾಗತಿಸುತ್ತಾನೆ. ಆದರೆ, ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನೋಟಿನ ಮೇಲಿನ ನಿಷೇಧದಿಂದಾಗಿ ಜನ ಸಾಮಾನ್ಯರಿಗೆ ಸಾಕಷ್ಟು ಸಮಸ್ಯೆಗಳು ಎದುರಾಗಿದೆ. ಮುಂದೆ ಏನಾಗುತ್ತದೆ ಎಂಬ ಭಯದಲ್ಲಿಯೇ ಜನರು ಜೀವನ ನಡೆಸುವಂತಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ತನ್ನ ನಿರ್ಧಾರದ ಕುರಿತು ಮರು ಚಿಂತನೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರದ ಕುರಿತಂತೆ ಸಾಕಷ್ಟು ರೈತರು, ಕೆಲಸಗಾರರು ಮತ್ತು ಉದ್ಯಮಿಗಳು ಉದ್ಧವ್ ಠಾಕ್ರೆಯವರನ್ನು ಭೇಟಿ ಮಾಡಿದ್ದಾರೆ. ಸರ್ಕಾರದ ನಿರ್ಧಾರ ಕುರಿತಂತೆ ಮಧ್ಯಪ್ರವೇಶ ಮಾಡುವಂತೆ ಹಾಗೂ ಪರಿಸ್ಥಿತಿ ಕುರಿತಂತೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಂಡುವಂತೆ ಆಗ್ರಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.