ಶ್ರೀನಗರದಲ್ಲಿ ದಟ್ಟ ಮಂಜು; ವಿಮಾನಗಳ ಹಾರಾಟ ರದ್ದು
ಶ್ರೀನಗರ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ ದಟ್ಟ ಮಂಜು ಕವಿದಿರುವ ಕಾರಣ ಹಲವಾರು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳಿಂದ...

ಶ್ರೀನಗರ: ಶ್ರೀನಗರ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ ದಟ್ಟ ಮಂಜು ಕವಿದಿರುವ ಕಾರಣ ಹಲವಾರು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ದಟ್ಟ ಮಂಜಿನ ವಾತಾವರಣದಿಂದಾಗಿ ಶ್ರೀನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಾದ್ಯಂತ ಮಳೆ ಹಾಗೂ ಮಂಜು ಸುರಿಯಲಿದ್ದು, ಮುಂದಿನ 24 ಗಂಟೆಗಳ ಕಾಲ ಶೀತಮಯ ವಾತಾವರಣವಿರಲಿದೆ ಎಂದು ಹಮಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ವಿಮಾನ ಹಾರಾಟಕ್ಕೆ ಸಮಸ್ಯೆ ಎದುರಾಗಿದ್ದು, ಎಲ್ಲಾ ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ. ಹವಾಮಾನ ಪರಿಸ್ಥಿತಿಯಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


