ನಿಷೇಧಿತ ಹಳೆಯ ನೋಟುಗಳಲ್ಲೇ ರೈತರು ಬಿತ್ತನೆ ಬೀಜ ಖರೀದಿಸಬಹುದು: ಕೇಂದ್ರ
ನೋಟು ನಿಷೇಧದ ಬಳಿಕ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ ರೈತರಿಗೆ ಕೇಂದ್ರ ಸರ್ಕಾರ ಸಮಾಧಾನಕರ ಸುದ್ದಿ ನೀಡಿದ್ದು, ನಿಷೇಧವಾಗಿರುವ ಹಳೆಯ ನೋಟುಗಳಿಂದಲೇ ರೈತರು ಬಿತ್ತನೆ ಬೀಜ ಖರೀದಿ ಮಾಡಬಹುದು ಎಂದು ಹೇಳಿದೆ.

ನವದೆಹಲಿ: ನೋಟು ನಿಷೇಧದ ಬಳಿಕ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ ರೈತರಿಗೆ ಕೇಂದ್ರ ಸರ್ಕಾರ ಸಮಾಧಾನಕರ ಸುದ್ದಿ ನೀಡಿದ್ದು, ನಿಷೇಧವಾಗಿರುವ ಹಳೆಯ ನೋಟುಗಳಿಂದಲೇ ರೈತರು ಬಿತ್ತನೆ ಬೀಜ ಖರೀದಿ ಮಾಡಬಹುದು ಎಂದು ಹೇಳಿದೆ.
500 ರು. ಮುಖಬೆಲೆಯ ನೋಟುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಿ ಬಿತ್ತನೇ ಬೀಜ ಕೇಂದ್ರಗಳಲ್ಲಿ ನೀಡಿ ಬಿತ್ತನೆ ಬೀಜ ಖರೀದಿಸಬಹುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಸರ್ಕಾರಿ ಕೇಂದ್ರಗಳಷ್ಟೇ ಅಲ್ಲದೇ ಸರ್ಕಾರಿ ಅನುದಾನಿತ ಬಿತ್ತನೆ ಬೀಜ ಕೇಂದ್ರಗಳು, ರಾಷ್ಟ್ರೀಯ ಮತ್ತು ರಾಜ್ಯ ಬೀಜ ಸಂಸ್ಥೆಗಳು ಹಾಗೂ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಿಷೇಧಿತ ನೋಟನ್ನು ನೀಡಿ ರೈತರು ಬಿತ್ತನೆ ಬೀಜ ಖರೀದಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದರೆ ಹಳೆಯ ನೋಟುಗಳಲ್ಲಿ ಬಿತ್ತನೆ ಬೀಜ ಖರೀದಿಸುವವರು ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿ ನೀಡಬೇಕು ಎಂದೂ ಸರ್ಕಾರ ಹೇಳಿದೆ.
ನೋಟು ನಿಷೇಧದಿಂದಾಗಿ ರೈತಾಪಿ ವರ್ಗಕ್ಕೆ ಅನಾನುಕೂಲವಾಗುತ್ತಿರುವ ಕುರಿತು ವರದಿಗಳು ಬಂದ ಹಿನ್ನಲೆಯಲ್ಲಿ ಕೇಂದ್ರ ಕೃಷಿ ಇಲಾಖೆ ಈ ಕ್ರಮ ಕೈಗೊಂಡಿದ್ದು, ಕೃಷಿ ಚಟುವಟಿಕೆಗಳ ಮೇಲೆ ನೋಟು ನಿಷೇಧ ವ್ಯತಿರಿಕ್ತ ಪರಿಣಾಮ ಬೀರದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


