ಎಸ್ಎಸ್ಎಂಕೆ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ
ಕೋಲ್ಕತಾದ ಎಸ್ಎಸ್ಎಂಕೆ (ಸೇಥ್ ಸುಖ್ಲಾಲ್ ಕರ್ನಾನಿ ಮೆಮೋರಿಯಲ್ )ಆಸ್ಪತ್ರೆಯಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ...

ಕೋಲ್ಕತಾ: ಕೋಲ್ಕತಾದ ಎಸ್ಎಸ್ಎಂಕೆ (ಸೇಥ್ ಸುಖ್ಲಾಲ್ ಕರ್ನಾನಿ ಮೆಮೋರಿಯಲ್ ) ಆಸ್ಪತ್ರೆಯಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ.
ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯ 5ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆ 10 ಅಗ್ನಿಶಾಮಕ ದಳ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಘಟನೆಯಲ್ಲಿ ಸಾವು-ನೋವುಗಳು ಸಂಭವಿಸಿರುವುದಾಗಿ ಯಾವುದೇ ವರದಿಗಳಾಗಿಲ್ಲ.
ಇನ್ನು ಘಟನೆ ಕುರಿತಂತೆ ಮುಖ್ಯಂತ್ರಿ ಮಮತಾ ಬ್ಯಾನರ್ಜಿಯವರು ವರದಿ ಪಡೆದುಕೊಂಡಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಆಸ್ಪತ್ರೆಯ 5ನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ಕೆನ್ನಾಲಿಗೆ ಇತರೆ ಮಹಡಿಗಳಿಗೆ ಹಬ್ಬುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


