ರಾಷ್ಟ್ರೀಯ ಭದ್ರತೆಯನ್ನು ಪಕ್ಕಕ್ಕಿಟ್ಟು ಪಾಕ್'ನೊಂದಿಗೆ ಸಂಬಂಧ ಸಾಧ್ಯವಿಲ್ಲ: ಪರಿಕ್ಕರ್
ನೆರೆ ರಾಷ್ಟ್ರದೊಂದಿಗೆ ಉತ್ತಮ ಸಂಬಂಧದಿಂದ ಇರಲು ಭಾರತ ಬಯಸುತ್ತದೆ. ಆದರೆ, ರಾಷ್ಟ್ರೀಯ ಭದ್ರತೆಯನ್ನು ಬದಿಗೊತ್ತಿ ಪಾಕಿಸ್ತಾನದೊಂದಿಗೆ ಸಂಬಂಧ ಮುಂದುವರೆಸಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

ಮುಂಬೈ; ನೆರೆ ರಾಷ್ಟ್ರದೊಂದಿಗೆ ಉತ್ತಮ ಸಂಬಂಧದಿಂದ ಇರಲು ಭಾರತ ಬಯಸುತ್ತದೆ. ಆದರೆ, ರಾಷ್ಟ್ರೀಯ ಭದ್ರತೆಯನ್ನು ಬದಿಗೊತ್ತಿ ಪಾಕಿಸ್ತಾನದೊಂದಿಗೆ ಸಂಬಂಧ ಮುಂದುವರೆಸಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸೋಮವಾರ ಹೇಳಿದ್ದಾರೆ.
ಐಎನ್ಎಸ್ ಚೆನ್ನೈಯನ್ನು ನೌಕಾಪಡೆಗೆ ಸೇರ್ಪಡೆ ಮಾಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ ಅವರು, ಉಭಯ ದೇಶಗಳು ಪರಸ್ಪರ ಹೊಂದಾಣಿಕೆಯಿಂದ ಉತ್ತಮ ಸಂಬಂಧದಲ್ಲಿರುವುದು ಎರಡೂ ರಾಷ್ಟ್ರಗಳಿಗೂ ಸಹಾಯಕವಾಗುತ್ತದೆ. ಆದರೆ, ದೇಶದ ಭದ್ರತೆಯನ್ನು ಪಕ್ಕಕ್ಕಿಟ್ಟು ಪಾಕಿಸ್ತಾನದೊಂದಿಗೆ ಸಂಬಂಧ ಮುಂದುವರೆಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಗಡಿ ನಿಯಂತ್ರಣ ರೇಖೆ ಬಳಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಭಾರತೀಯ ಸೇನೆಯನ್ನು ಗುರಿಯಾಗಿಸಿಟ್ಟುಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪರಿಕ್ಕರ್ ಅವರು ಈ ಹೇಳಿಕೆ ನೀಡಿದ್ದಾರೆ,
ಭಾರತೀಯ ಸೇನೆ ಎಂದಿಗೂ ಮೊದಲು ದಾಳಿ ಮಾಡುವುದಿಲ್ಲ. ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಪ್ರಚೋದನೆ ನೀಡುವುದು, ಭಾರತೀಯ ಸೇನೆಯನ್ನು ಗುರಿಯಾಗಿಸಿಟ್ಟುಕೊಂಡು ದಾಳಿ ನಡೆಸಿದಾಗ ಮಾತ್ರ ಸೇನೆ ದಿಟ್ಟ ಉತ್ತರವನ್ನು ನೀಡುತ್ತದೆ ಎಂದಿದ್ದಾರೆ.
ಪಾಕಿಸ್ತಾನ ಸೇನೆಯ ವಶದಲ್ಲಿರುವ ಯೋಧ ಚಂದು ಬಾಬುಲಾಲ್ ಚೌಹಾಣ್ ಕುರಿತಂತೆ ಮಾತನಾಡಿರುವ ಅವರು, ಭಾರತೀಯ ಯೋಧ ಜೀವಂತವಾಗಿದ್ದು, ಸುರಕ್ಷಿತನಾಗಿದ್ದಾನೆಂದು ಪಾಕಿಸ್ತಾನ ಸರ್ಕಾರ ಮಾಹಿತಿ ನೀಡಿದೆ. ಯೋಧನನ್ನು ಭಾರತಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಬಾಂಗ್ಲಾದೇಶ ಪ್ರವಾಸ ಕುರಿತಂತೆ ಮಾತನಾಡಿರುವ ಅವರು, ಬಾಂಗ್ಲಾ ಪ್ರವಾಸವೊಂದು ಪೂರ್ವಯೋಜಿತ ಪ್ರವಾಸವಾಗಿದ್ದು, ನೆರೆ ರಾಷ್ಟ್ರಗಳಿಗೆ ಭೇಟಿ ನೀಡುತ್ತಿರುವುದರಿಂದ ದ್ವಿಪಕ್ಷೀಯ ಸಂಬಂಧಗಳು ಗಟ್ಟಿಯಾಗುತ್ತದೆ ಎಂದು ಹೇಳಿದ್ದಾರೆ.
ತದನಂತರ ಐಎನ್ಎಸ್ ಚೆನ್ನೈ ಸೇರ್ಪಡೆ ಕುರಿತಂತೆ ಮಾತನಾಡಿರುವ ಅವರು, ಭಾರತೀಯ ನೌಕಾಪಡೆಗೆ ಐಎನ್ಎಸ್ ಚೆನ್ನೈಯನ್ನು ಸೇರ್ಪಡೆ ಮಾಡಲಾಗಿದ್ದು, ಇದೊಂದು ಐತಿಹಾಸಿಕ ದಿನವಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


